Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ದ.ಕ ಜಿಲ್ಲೆಯಲ್ಲಿ ಬಜೆಟ್ ಬಗ್ಗೆ ಮಿಶ್ರ...

​ದ.ಕ ಜಿಲ್ಲೆಯಲ್ಲಿ ಬಜೆಟ್ ಬಗ್ಗೆ ಮಿಶ್ರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ16 Feb 2018 11:26 PM IST
share

ಮಂಗಳೂರು, ಫೆ. 16: ಈ ಬಾರಿಯ ಕರ್ನಾಟಕ ರಾಜ್ಯದ ಬಜೆಟ್ ಬಗ್ಗೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘಟನೆಗಳ ಮುಖಂಡರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿಲ್ಲ: ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ದಿಗೆ ಒತ್ತು ನೀಡಿಲ್ಲ. ಚುನಾವಣೆ ಹತ್ತಿರ ಬಂದಿರುವುದರಿಂದ ಈ ಬಜೆಟ್‌ಗೆ ಮಹತ್ವ ಇಲ್ಲ. ಇದೊಂದು ಚುನಾವಣಾ ಬಜೆಟ್. ಈ ಬಜೆಟ್ ಜಾರಿಯಾಗುವುದು ಮುಂದೆ ಯಾವ ಪಕ್ಷದ ಆಡಳಿತದಲ್ಲಿ ಸರಕಾರ ಬರುತ್ತದೆ ಎನ್ನುವುದನ್ನು ಹೊಂದಿಕೊಂಡು ಇದೆ. ದ.ಕ ಜಿಲ್ಲೆಯ ಕಾರಾಗೃಹಕ್ಕೆ ಮಾತ್ರ ಅನುದಾನ ನೀಡಿದ್ದಾರೆ ಹೊರತು ಉಳಿದ ಕ್ಷೇತ್ರಗಳ ಬಗ್ಗೆ ಗಮನಹರಿಸಿಲ್ಲ. ಅನುದಾನ ನೀಡಿಲ್ಲ.

- ಸಂಜೀವ ಮಟಂದರೂರು ಜಿಲ್ಲಾ ಬಿಜೆಪಿ ಅಧ್ಯಕ್ಷ.

ಚುನಾವಣಾ ಗಿಮಿಕ್‌ನ ಬಜೆಟ್: ಈ ಬಾರಿಯ ಬಜೆಟ್ ಚುನಾವಣಾ ಗಿಮಿಕ್‌ನ ಬಜೆಟ್ .ಅನುಷ್ಠಾನಗೊಳ್ಳುವ ಬಜೆಟ್ ಅಲ್ಲ. ಪ್ರತಿ ಬಾರಿಯಂತೆ ದಕ್ಷಿಣ ಕನ್ನಡದ ಸಮಸ್ಯೆಗಳ ಬಗ್ಗೆ ಬಜೆಟ್‌ನಲ್ಲಿ ಗಮನಹರಿಸಲಾಗಿಲ್ಲ. ಇಲ್ಲಿನ ರಬ್ಬರ್ ಬೆಳೆಗಾರರು ರಬ್ಬರು ತೋಟಗಳನ್ನು ಕಡಿದು ಹಾಕುತ್ತಿದ್ದಾರೆ. ಕೇರಳದಲ್ಲಿ ಸರಕಾರವೇ ರಬ್ಬರಿಗೆ 70 ರೂ ಸಬ್ಸಿಡಿ ನೀಡುತ್ತದೆ. ಆ ನಿರೀಕ್ಷೆ ಇಲ್ಲಿನ ಬೆಳೆಗಾರರಿಗೂ ಇತ್ತು ಅದು ಹುಸಿಯಾಗಿದೆ. ಸಬಲೀಕರಣದ ಕೆಲಸ ಹಿಂದೆಯೇ ಆಗಬೇಕಿತ್ತು. ರೈತರ ಎಲ್ಲಾ ರೀತಿಯ ಸಾಲಮನ್ನಾ ಮಾಡಲು ಕ್ರಮ ಆಗಲಿಲ್ಲ .ಈ ಬಾರಿ ಬಜೆಟ್ ಘೋಷಣೆ ಜಾರಿಯಾಗುವುದು ಸಂಶಯವಿದೆ.

-ವಿಟ್ಲ ಮುಹಮ್ಮದ್ ಕುಂಞಿ, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ.

ಈ ಬಾರಿಯ ಬಜೆಟ್ ಅತ್ಯುತ್ತಮ ಬಜೆಟ್: ಈ ಬಾರಿಯ ಬಜೆಟ್ ಅತ್ಯುತ್ತಮ ಬಜೆಟ್. ರಾಜ್ಯದಲ್ಲಿ ಇದುವರೆಗೆ ಇ ರೀತಿಯ ಬಜೆಟ್‌ಗಳಲ್ಲಿ ಇದು ಅತ್ಯುತ್ತಮ ಎನ್ನಬಹುದು. ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರ ವರೆಗೆ ಎಲ್ಲರಿಗೂ ಆದ್ಯತೆ ನೀಡಲಾಗಿದೆ. ಕೃಷಿಕರಿಗೆ ಗರಿಷ್ಠ ಬೆಂಬಲ ನೀಡಲಾಗಿದೆ. ರೈತರ ಸಾಲ ಮನ್ನಾ ಮಾಡುವ ನೀಡಿದ ಭರವಸೆ ಹುಸಿಯಾಗಲಿಲ್ಲ. ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಿರುವುದು, ವಿದ್ಯಾರ್ಥಿ ವೇತನ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಿರುವುದು, ಕೃಷಿಕರಿಗೆ ಸಹಾಯವಾಗುವ ಕಡಿಮೆ ಬಡ್ಡಿದರದ ಸಾಲ ಯೋಜನೆ, ಮಹಿಳೆಯರು, ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಜನರ ನಿರೀಕ್ಷೆಗೆ ಪೂರಕವಾಗಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಅನುದಾನ ನೀಡಲಾಗಿದೆ. ದ.ಕ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶವನ್ನು ಗುರುತಿಸಿ ಅನುದಾನ ನೀಡಿರುವುದು, ಜಿಲ್ಲೆಗೂ ಈ ಬಾರಿಯ ಬಜೆಟ್‌ನಲ್ಲಿ ಗಮನ ನೀಡಿದ್ದಾರೆ ಎನ್ನುವುದನ್ನು ಸೂಚಿಸುತ್ತದೆ.

- ಹರೀಶ್ ಕುಮಾರ್ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ.

ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಪ್ರೋತ್ಸಾಹಕ ಬಜೆಟ್: ಈ ಬಾರಿಯ ಬಜೆಟ್ ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳ ಬಗ್ಗೆ ಗಮನಹರಿಸಿರುವ ಬಜೆಟ್ ಆಗಿದ್ದು; ಈ (ಎಂಎಸ್‌ಎಂಇ) ವಿಭಾಗದ ಉದ್ಯಮಿಗಳಿಗೆ ಬಡ್ಡಿಯಲ್ಲಿ ಸಬ್ಸಿಡಿಯನ್ನು ನೀಡಿರುವುದು ಉತ್ತಮ ಪ್ರಸ್ತಾಪ. ಕಾರ್ಮಿಕರಿಂದ ನಡೆಯುವ ಕೈಗಾರಿಕೆಗಳಿಗೆ ಹೆಚ್ಚಿನ ಗಮನಹರಿಸುವ ಕೈಗಾರಿಕೆಗಳಿಗೆ ಒತ್ತು ನೀಡುವ ಪ್ರಸ್ತಾಪದಿಂದ ಹೆಚ್ಚಿನ ಯುವ ಜನರಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ ಇದು ಸರಿಯಾದ ನಿರ್ಧಾರವಾಗಿದೆ. ಹೆಚ್ಚು ಟೌನ್ ಶಿಫ್ ನಿರ್ಮಾಣ, ಗ್ರಾಮೀಣ ಉದ್ಯಮ ವಲಯ, ರಾಜ್ಯ ಕ್ಲಸ್ಟರ್ ಅಭಿವೃದ್ಧಿ ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗೆ ಸಹಾಯವಾಗಲಿದೆ. ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ ಬೈಕಂಪಾಡಿ ಕೈಗಾರಿಕಾ ಪ್ರದೇಶ ವನ್ನು ಕೈಗಾರಿಕಾ ಟೌನ್ ಶಿಫ್ ಪ್ರಾಧಿಕಾರವಾಗಿ ಘೋಷಿಸಿದ್ದು, ಈ ಬಾರಿ ಮೂಲಭೂತ ಸೌಕರ್ಯ ಮತ್ತು ಅನುದಾನದ ಸಹಾಯ ನೀಡಬೇಕಾಗಿದೆ.

-ಕೆನರಾ ಪ್ಲಾಸ್ಟಿಕ್ ಉತ್ಫಾದಕರ ಮತ್ತು ಮಾರಾಟಗಾರರ ಎಸೊಸಿಯೇಶನ್‌ನ (ಸಿಪಿಎಂಟಿಎ)ಅಧ್ಯಕ್ಷ ಬಿ.ಎ.ನಝೀರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X