Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಧನುಷ್-ಸುದೀಪ್ ಜುಗಲ್ ಬಂದಿ

ಧನುಷ್-ಸುದೀಪ್ ಜುಗಲ್ ಬಂದಿ

ವಾರ್ತಾಭಾರತಿವಾರ್ತಾಭಾರತಿ17 Feb 2018 5:39 PM IST
share
ಧನುಷ್-ಸುದೀಪ್ ಜುಗಲ್ ಬಂದಿ

ಕಿಚ್ಚ ಸುದೀಪ್ ಕನ್ನಡ ಪ್ರೇಕ್ಷಕರಿಗೆ ಮಾತ್ರವಲ್ಲ ದಕ್ಷಿಣ ಭಾರತದ ಚಿತ್ರರಸಿಕರೆಲ್ಲರಿಗೂ ಅಚ್ಚುಮೆಚ್ಚು ಎಂಬುದರಲ್ಲಿ ಎರಡು ಮಾತಿಲ್ಲ. ‘ಈಗ’ ಚಿತ್ರದ ಮೂಲಕ ಎಲ್ಲಾ ಭಾಷೆಗಳ ಪ್ರೇಕ್ಷಕರ ಮನಸೂರೆಗೊಂಡಿರುವ ಸುದೀಪ್, ಓರ್ವ ಬಾಕ್ಸ್ ಆಫೀಸ್ ಗ್ಯಾರಂಟಿ ನಟನೆಂದೇ ಈಗ ಗುರುತಿಸಲ್ಪಡುತ್ತಿದ್ದಾರೆ. ಈ ಮಧ್ಯೆ ಹಾಲಿವುಡ್ ಚಿತ್ರ ‘ರೈಸನ್’ನಲ್ಲಿ ನಟಿಸುತ್ತಿರುವ ಸುದೀಪ್, ಅಂತಾರಾಷ್ಟ್ರೀಯ ಮಟ್ಟದ ನಟನಾಗಿಯೂ ಮಿಂಚಲಿದ್ದಾರೆ.

ಇದೀಗ ಸುದೀಪ್, ತಮಿಳಿನ ಸೂಪರ್‌ಸ್ಟಾರ್ ಧನುಷ್ ನಿರ್ದೇಶಿಸಿ, ನಟಿಸಲಿರುವ ತಮಿಳು ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ಅಭಿನಯದ ಸೂಪರ್‌ಹಿಟ್ ಚಿತ್ರ ಮೆರ್ಸಲ್ ನಿರ್ಮಿಸಿದ್ದ ಥೆಂಡ್ರಲ್ ಸ್ಟುಡಿಯೋಸ್ ಈ ಚಿತ್ರವನ್ನು ನಿರ್ಮಿಸಲಿದೆ.

   ಇನ್ನೂ ಹೆಸರಿಡದ ಈ ಚಿತ್ರದ ಪ್ರಿಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಸದ್ಯದಲ್ಲೇ ಚಿತ್ರೀಕರಣ ಆರಂಭಗೊಳ್ಳಲಿದೆ. ಇತರ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿರುವ ನಡುವೆಯೂ ಧನುಷ್, ತಾನು ನಿರ್ದೇಶಿಸಲಿರುವ ಈ ಚಿತ್ರದ ಬಗ್ಗೆ ವಿಶೇಷ ಅಸ್ಥೆ ವಹಿಸಿದ್ದಾರೆ. ಪ್ರಸ್ತುತ ಚಿತ್ರದ ತಾರಾಗಣದ ಆಯ್ಕೆಯನ್ನು ಅಂತಿಮಗೊಳಿಸುತ್ತಿರುವ ಧನುಷ್, ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

    ಈ ನಡುವೆ ಸುದೀಪ್, ಸ್ಯಾಂಡಲ್‌ವುಡ್‌ನಲ್ಲಿ ಪ್ರೇಮ್ ನಿರ್ದೇಶನದ ದಿ ವಿಲನ್ ನಟಿಸುತ್ತಿದ್ದು, ಆ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದೆ. ಅಷ್ಟೇ ಅಲ್ಲದೆ, ಅಂಬರೀಷ್ ಅಭಿನಯದ ‘ಅಂಬಿ ನಿನಗೆ ವಯಸ್ಸಾಯಿತೋ ’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ತಮಿಳಿನಲ್ಲಿ ಅದ್ಭುತ ಯಶಸ್ಸು ದಾಖಲಿಸಿದ ಪವರ್‌ಪಾಂಡಿ ಚಿತ್ರದಿಂದ ಪ್ರಭಾವಿತವಾದ ‘ಅಂಬಿ ನಿನಗೆ ವಯಸ್ಸಾಯಿತೋ’ನಲ್ಲಿ ಸುದೀಪ್ ಅವರು ಯುವಕ ಅಂಬರೀಷ್‌ನ ಪಾತ್ರದಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ಸುದೀಪ್ ಅವರು ಎಸ್.ಕೃಷ್ಣ ನಿರ್ದೇಶನದ ಪೈಲ್ವಾನ್ ಹಾಗೂ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರಗಳಿಗಾಗಿ ಏಕಕಾಲದಲ್ಲಿ ಬಣ್ಣಹಚ್ಚಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X