Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ರೈಲ್ವೆ ಯೋಜನೆಗೆ ತ್ವರಿತ ಭೂಮಿ...

ತುಮಕೂರು: ರೈಲ್ವೆ ಯೋಜನೆಗೆ ತ್ವರಿತ ಭೂಮಿ ಹಸ್ತಾಂತರಿಸಲು ಸಂಸದರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Feb 2018 7:35 PM IST
share
ತುಮಕೂರು: ರೈಲ್ವೆ ಯೋಜನೆಗೆ ತ್ವರಿತ ಭೂಮಿ ಹಸ್ತಾಂತರಿಸಲು ಸಂಸದರ ಸೂಚನೆ

ತುಮಕೂರು,ಫೆ.17: ತುಮಕೂರು-ರಾಯದುರ್ಗ ಹಾಗೂ ತುಮಕೂರು ದಾವಣಗೆರೆ ರೈಲ್ವೆ ಯೋಜನೆ ನಿರ್ಮಾಣ ಕಾಮಗಾರಿಕೆ ಅಗತ್ಯವಿರುವ ಜಮೀನನ್ನು ಆದಷ್ಟು ಬೇಗ ಹಸ್ತಾಂತರಿಸಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗೆ ಹೆಚ್ಚಿನ ವೇಗ ನೀಡುವಂತೆ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ತುಮಕೂರು-ರಾಯದುರ್ಗ ಹಾಗೂ ತುಮಕೂರು ದಾವಣಗೆರೆ ರೈಲ್ವೆಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತಿದ್ದ ಅವರು, ಈಗಾಗಲೇ ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಕಾಮಗಾರಿಯು ತುಮಕೂರು ತಾಲೂಕಿನಿಂದ ಆರಂಭವಾಗಿದ್ದು, ಕಾಮಗಾರಿ ಭರದಿಂದ ಸಾಗಿದೆ. ಉಳಿದಂತೆ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡದಲ್ಲಿ ಕಾಮಗಾರಿಯು ಆರಂಭವಾಗಬೇಕಿದೆ. ಆದಷ್ಟು ಬೇಗ ಅಗತ್ಯವಿರುವ ಜಮೀನನ್ನು ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ ಪಾವಗಡ ತಾಲ್ಲೂಕಿನಲ್ಲಿ 339.17 ಎಕರೆ ಭೂಮಿ ಸ್ವಾಧೀನಕ್ಕಾಗಿ ಜೆಎಂಸಿ ಕಾರ್ಯ ಪೂರ್ಣಗೊಂಡಿದ್ದು ಕರ್ನಾಟಕ ಭೂಸ್ವಾಧೀನ ಕಾಯ್ದೆ 15(2) ರನ್ವಯ ಸರಕಾರದಿಂದ ಅನುಮತಿ ಪಡೆಯಬೇಕಾಗಿದೆ. ಭೂಸ್ವಾಧೀನ ಅಧಿಕಾರಿಯಿಂದ ಬರುವ ಸೋಮವಾರದೊಳಗೆ ಪ್ರಸ್ತಾವನೆ ಪಡೆದು ಸರಕಾರದಿಂದ ಅನುಮತಿ ಪಡೆಯಲಾಗುವುದು. ಫೆಬ್ರವರಿ ಅಂತ್ಯದೊಳಗೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದಲ್ಲದೆ, ಮಾರ್ಚ್ 10ರೊಳಗೆ ಪಾವಗಡ ತಾಲೂಕಿನ 339.17ಎಕರೆ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಕೊರಟಗೆರೆ ತಾಲೂಕಿನಲ್ಲಿ ಯೋಜನೆಗೆ ಅಗತ್ಯವಿದ್ದ 198.11 ಎಕರೆ ಪೈಕಿ 53.38 ಎಕರೆ ಭೂಮಿಯನ್ನು, ಮಧುಗಿರಿ ತಾಲೂಕಿನಲ್ಲಿ 462.12 ಎಕರೆ ಪೈಕಿ 34.34 ಎಕರೆ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಉಳಿದ ಜಮೀನಿಗೆ ಶೀಘ್ರ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ಕ್ರಮವಹಿಸಲಾಗುವುದು ಎಂದು ವಿಶೇಷ ಭೂ ಸ್ವಾಧೀನ ಅಧಿಕಾರಿ ಆರತಿ ಆನಂದ್ ಹೇಳಿದರು.

ರೈಲ್ವೆ ಮಂಡಳಿಯ ಹೊಸ ನಿಯಮಾವಳಿಯ ಪ್ರಕಾರ ರೈಲ್ವೆ ಮಾರ್ಗ ಹಾದು ಹೋಗುವ ಮಾರ್ಗಗಳಲ್ಲಿ ಲೆವಲ್‍ಕ್ರಾಸ್ ಬದಲಾಗಿ ಬ್ರಿಡ್ಜ್ ಗಳನ್ನು ನಿರ್ಮಿಸಬೇಕಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ ಪಾವಗಡದಲ್ಲಿ 86 ಎಕರೆ ಅದೇ ರೀತಿ ಕೊರಟಗೆರೆ, ಮಧುಗಿರಿ, ತುಮಕೂರು ತಾಲೂಕಿನಲ್ಲಿ ಹೆಚ್ಚುವರಿ ಜಮೀನಿನ ಅಗತ್ಯವಿದ್ದು, ಈ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ನೀಡುವಂತೆ ರೈಲ್ವೆ ಅಧಿಕಾರಿಗಳು ಸಭೆಗೆ ತಿಳಿಸಿದರು.

ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ ತುಮಕೂರು ತಾಲೂಕಿನಲ್ಲಿ 323 ಎಕರೆ ಹಾಗೂ ಶಿರಾ ತಾಲೂಕಿನಲ್ಲಿ 551 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಈ ಪೈಕಿ ಈಗಾಗಲೇ 84 ಎಕರೆ ಭೂಮಿ ರೈಲ್ವೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ತುಮಕೂರು ದಾವಣಗೆರೆ ರೈಲ್ವೆ ಯೋಜನೆಯ ಭೂಸ್ವಾಧೀನಾಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮಧುಗಿರಿ ಉಪ ವಿಭಾಗಾಧಿಕಾರಿ ಡಾ.ವೆಂಕಟೇಶಯ್ಯ ಸೇರಿದಂತೆ ಕಂದಾಯ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X