ಮಡಿಕೇರಿ: ಫೆ.20 ರಂದು ಸಾಮಾಜಿಕ ನ್ಯಾಯ ದಿನಾಚರಣೆ ಕಾನೂನು ಶಿಬಿರ
ಮಡಿಕೇರಿ, ಫೆ.18: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ “ಸಾಮಾಜಿಕ ನ್ಯಾಯ ದಿನಾಚರಣೆ ಪ್ರಯುಕ್ತ ಕಾನೂನು ಶಿಬಿರವು ಫೆ.20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.
ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಪವನೇಶ್ ಡಿ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಜೆನಿಫರ್ ಲೊಲಿಟ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ವಿಜಯ ಕುಮಾರ್, ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ. ಜೋಸೆಫ್, ವಕೀಲರಾದ ಪಿ.ಕೃಷ್ಣಮೂರ್ತಿ ಮತ್ತು ಇತರರು ಭಾಗವಹಿಸಲಿದ್ದಾರೆ.
Next Story





