ಬೆಂಗಳೂರು: ಮುಹಮ್ಮದ್ ನಲಪಾಡ್ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಧರಣಿ
ಯುವಕನ ಮೇಲೆ ಹಲ್ಲೆ ಪ್ರಕರಣ
.jpg)
ಬೆಂಗಳೂರು, ಫೆ.18: ಯುವಕನೊರ್ವನ ಮೇಲೆ ಹಲ್ಲೆ ಮಾಡಿರುವ ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ.ಹಾರೀಸ್ ಅವರ ಪುತ್ರ ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಲಪಾಡ್‌ರನ್ನು ಬಂಧಿಸಬೇಕೆಂದು ಒತ್ತಾಯಿಸಿ ಬಿಜೆಪಿ, ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಮಾಯಕ ಯುವಕನಿಗೆ ಶಾಸಕ ಹಾರೀಸ್ ಪುತ್ರ ಮುಹಮ್ಮದ್ ನಲಪಾಡ್ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಆದರೂ ಪೊಲೀಸರು ಆರೋಪಿಯನ್ನು ಬಂಧಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲವೆಂದು ಬಿಜೆಪಿ ಕಾರ್ಯಕರ್ತರು ಕಬನ್‌ಪಾರ್ಕ್ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಹಾರೀಸ್ ವಿರುದ್ಧ ಆಕ್ರೋಶ: ಶಾಸಕ ಹಾರೀಸ್ ತನ್ನ ಮಗನ ರಕ್ಷಣೆಗಿದ್ದಾರೆ. ಹೀಗಾಗಿ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೀಸ್ ಹಾಗೂ ಮಗನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ, ಪಟ್ಟು ಹಿಡಿದರು.
ಹಾರೀಸ್ ಮನೆಗೆ ಭದ್ರತೆ: ಹಲ್ಲೆ ಪ್ರಕರಣದ ಮುಖ್ಯ ಆರೋಪಿ ಶಾಸಕ ಹಾರೀಸ್ ಪುತ್ರ ಮುಹಮ್ಮದ್ ನಲಪಾಡ್‌ರನ್ನು ಕೂಡಲೆ ಬಂಧಿಸಬೇಕು ಎಂದು ಒತ್ತಾಯಿಸಿ ಆಮ್‌ಆದ್ಮಿ ಕಾರ್ಯಕರ್ತರು ಹಾರೀಸ್ ಮನೆಯ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಶಾಸಕ ಹಾರೀಸ್ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.







