ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಹೆಬ್ರಿ, ಫೆ.18: ವರಂಗ ಗ್ರಾಮದ ಪದ್ಮಶ್ರೀ ನಗರ ಎಂಬಲ್ಲಿ ಫೆ.17ರಂದು ರಾತ್ರಿ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ವರಂಗ ನಿವಾಸಿ ಸತೀಶ್ ಪೂಜಾರಿ (45) ಎಂದು ಗುರುತಿಸ ಲಾಗಿದೆ. ಇವರು ಮುದ್ರಾಡಿ ಕಡೆಯಿಂದ ವರಂಗ ಕಡೆಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಪಜೆರೋ ಸ್ಪೋಟ್ಸರ್ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





