Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ನದ್ದು ಕಮಿಶನ್ ಸರಕಾರ,...

ಕಾಂಗ್ರೆಸ್ ನದ್ದು ಕಮಿಶನ್ ಸರಕಾರ, ನಮ್ಮದು ಮಿಶನ್ ಸರಕಾರ: ಮೈಸೂರಿನಲ್ಲಿ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ19 Feb 2018 8:18 PM IST
share
ಕಾಂಗ್ರೆಸ್ ನದ್ದು ಕಮಿಶನ್ ಸರಕಾರ, ನಮ್ಮದು ಮಿಶನ್ ಸರಕಾರ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಮೈಸೂರು,ಫೆ.19: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ 10 ಪರ್ಸೆಂಟ್ ಗಿಂತಲೂ ಹೆಚ್ಚು ಕಮಿಷನ್ ತೆಗೆದುಕೊಳ್ಳುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಮಿಷನ್ ಸರ್ಕಾರ ಬೇಕೇ ಅಥವಾ ಮಿಶನ್ ಸರ್ಕಾರ ಬೇಕೇ ಎಂಬುದನ್ನು ನೀವೇ ನಿರ್ಧರಿಸಿ. ಕರ್ನಾಟಕದಲ್ಲಿ ಕಪ್ಪವನ್ನ ಡೈರಿಯಲ್ಲಿ ಬರೆದು ನಂತರ ಅದನ್ನು ಹರಿದು ಹಾಕುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. 

ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಬಿಜೆಪಿ ಪರಿವರ್ತನಾ ರ್ಯಾಲಿಯ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮನ್ನು 50 ವರ್ಷ ಆಳಿದ ಕಾಂಗ್ರೆಸ್ ನಮಗೆ ಏನು ಮಾಡಿದೆ ಎಂಬುದನ್ನು ವಿಮರ್ಶೆ ಮಾಡಿಕೊಳ್ಳಬೇಕಿದೆ. 4 ಕೋಟಿ ಕುಟುಂಬಗಳು ಇನ್ನೂ 18ನೇ ಶತಮಾನದಲ್ಲಿವೆ. ನಮ್ಮ ಪೂರ್ವಜರು ಕಂಡ ಕನಸು ಹಾಗೆಯೇ ಉಳಿದಿದೆ. ಭಾರತವನ್ನು ವಿಕಾಸದತ್ತ ಕೊಂಡೊಯ್ಯುವ ಪ್ರಯತ್ನಕ್ಕೆ ಕಾಂಗ್ರೆಸ್ ಅಡ್ಡಿ ಪಡಿಸುತ್ತಿದೆ. ಅಂತಹ ಸರಕಾರಗಳು ನಮಗೆ ಬೇಕೆ? ರಸ್ತೆಯ ಡುಬ್ಬಗಳಂತೆ ಇರುವ ಕಾಂಗ್ರೆಸ್ ಸರಕಾರವನ್ನು ಕಿತ್ತು ದೇಶವನ್ನು ವಿಕಾಸದತ್ತ ಕೊಂಡೊಯ್ಯುವ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತೆಗೆದುಕೊಂಡು ಬನ್ನಿ. 2022ರ ವೇಳೆಗೆ ಇಡೀ ದೇಶವನ್ನು ವಸತಿ ರಹಿತ ಮಾಡಲು ಹೊರಟಿದ್ದೇವೆ. ಅದಕ್ಕೆ ನಿಮ್ಮ ಸಹಕಾರ ಮುಖ್ಯ. ಇಂತಹ ಕೆಲಸ ಮಾಡಲು ಕಾಂಗ್ರೆಸ್ ಸರಕಾರ ಬಿಡುವುದಿಲ್ಲ. ಹಾಗಾಗಿ ಕಾಂಗ್ರೆಸ್ ಸರಕಾರವನ್ನು ತೊಲಗಿಸಿ ಎಂದು ಹೇಳಿದರು.

ಎಲ್ಲಿಯವರೆಗೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿರುತ್ತದೆಯೋ, ಅಲ್ಲಿಯವರೆಗೆ ರಾಜ್ಯ ಬರ್ಬಾದ್ ಆಗುತ್ತೆ. 50 ವರ್ಷಗಳಿಂದ ಕಾಂಗ್ರೆಸ್ ಮಾಡದ ಸಾಧನೆಯನ್ನು ಬಿಜೆಪಿ ಮಾಡಿದೆ. ಕಾಂಗ್ರೆಸ್ ರಾಜ್ಯದಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದೆ. ಆದರೆ ಇನ್ನು ಮುಂದೆ ಜನರು ಆ ಪಕ್ಷವನ್ನು ನಂಬುವುದಿಲ್ಲ. ಸಣ್ಣ ಮನಸ್ಸಿನ ಈ ಜನರಿಗೆ, ತಮ್ಮ ಕುರ್ಚಿ ಮುಖ್ಯವೇ ಹೊರತು, ರಾಜ್ಯದ ಅಭಿವೃದ್ಧಿಯಲ್ಲ ಎಂದು ಆರೋಪಿಸಿದರು.

ಮೈಸೂರು ಭಾವೈಕ್ಯತೆಯ ನಗರ. ಇಲ್ಲಿಂದ ಬೆಂಗಳೂರಿಗೆ ತೆರಳಿದವರು ತಮ್ಮ ಸಮಾಜವಾದವನ್ನು ಬಿಟ್ಟು ಸಮಾಜವನ್ನು ಹೊಡೆಯುವಂತಹ ಪಾಪದ ಕೆಲಸವನ್ನು ಮಾಡುತ್ತಾರೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ರಾಜ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹತ್ವ ಪೂರ್ಣ ಯೋಜನೆಗೆ ಚಾಲನೆ ನೀಡಿರುವುದು ನನ್ನ ಸೌಭಾಗ್ಯ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು 6 ಲೇನ್ ಮಾರ್ಗಗಳನ್ನಾಗಿ ಪರಿವರ್ತನೆ ಮಾಡುವುದಕ್ಕೆ 7 ಸಾವಿರ ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಇದಲ್ಲದೇ ಮೈಸೂರಿನ ನಾಗೇನಹಳ್ಳಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಸ್ಯಾಟಲೈಟ್ ರೈಲ್ವೆ ನಿಲ್ದಾಣವನ್ನು ನಿರ್ಮಾಣ ಮಾಡಲಾಗುವುದು. 76 ರೈಲುಗಳು ಮೈಸೂರಿನಲ್ಲಿ ಸಂಚರಿಸಲಿವೆ ಎಂದು  ಘೋಷಣೆ ಮಾಡಿದರು.

ಹಾಗೆಯೇ ಮೈಸೂರು- ಉದಯಪುರ ರೈಲು ಮಾರ್ಗದಿಂದ ಉತ್ತೇಚನ ಸಿಗುತ್ತೆ. ಇದು ನಾಲ್ಕು ರಾಜ್ಯಗಳ ಮೇಲೆ ಹಾದುಹೋಗುತ್ತದೆ. ಇದರಿಂದ ನಾಲ್ಕು ರಾಜ್ಯಗಳ ಎಲ್ಲರಿಗೂ ಉದ್ಯೋಗ ಸಿಗುತ್ತದೆ. ಜತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲೂ ಉದ್ಯೋಗ ಸಿಗಲಿದ್ದು, ಆಟೋ, ಟ್ಯಾಕ್ಸಿ, ಓಡಿಸುವವರು ಹಾಗು ದೇವಸ್ಥಾನದ ಬಳಿಯ ವ್ಯಾಪಾರಿಗಳಿಗೆ ಉದ್ಯೋಗ ದೊರೆತು ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಮೋದಿ ಹೇಳಿದರು.

ತಮ್ಮ ಭಾಷಣವನ್ನು ಕನ್ನಡದಲ್ಲೇ ಆರಂಭಿಸಿದ ಮೋದಿ, ಮೈಸೂರಿನ ನನ್ನ ಪ್ರೀತಿಯ ಬಂಧು ಭಗಿನಿಯರೆ ನಿಮ್ಮಗೆಲ್ಲಾ ನನ್ನ ನಮಸ್ಕಾರಗಳು. ಮೈಸೂರಿನ ಅಧಿದೇವತೆ ಶ್ರೀಚಾಮುಂಡೇಶ್ವರಿ ತಾಯಿಗೆ ನನ್ನ ಪ್ರಣಾಮಗಳು. ಮೈಸೂರು ಅರಸರು, ಸರ್.ಎಂ.ವಿಶ್ವೇಶರಯ್ಯ,  ರಾಷ್ಟ್ರಕವಿ ಕುವೆಂಪು, ಸುತ್ತೂರಿನ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ನನ್ನ ನಮಸ್ಕಾರಗಳು. ಮೈಸೂರು ರೇಶ್ಮೆ, ಮೈಸೂರು ಶ್ರೀಗಂಧ, ಮೈಸೂರು ಮಲ್ಲಿಗೆ, ಮೈಸೂರ್ ಪಾಕ್ ಜಗತ್ಪ್ರಸಿದ್ಧ ಎಂದ ಮೋದಿ ಬಣ್ಣಿಸಿದರು.

ಹೃದಯಘಾತದಿಂದ ಮೃತಪಟ್ಟ ಶಾಸಕ ಕೆ.ಎಸ್. ಪುಟ್ಟಣ್ಣನವರ ನಿಧನಕ್ಕೆ ಇದೇ ವೇಳೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಕೆಎಸ್ ಪುಟ್ಟಣ್ಣಯ್ಯ, ರೈತರಿಗಾಗಿ ಜೀವನ ಮುಡಿಪಾಗಿಟ್ಟರು ಎಂದು ಪ್ರಶಂಸಿಸಿದರು.

ನಂತರ ಅವರಿಗೆ ಮೈಸೂರು ಜಿಲ್ಲಾ ಹಾಗು ನಗರ ಬಿಜೆಪಿ ವತಿಯಿಂದ ಮೈಸೂರು ಪೇಟ ತೊಡಿಸಿ ರೇಷ್ಮೆ ಶಾಲು ಹೊದಿಸಿ 3 ಕೆ.ಜಿ. ತೂಕದ ಬಿಳ್ಳಿ ಗಣೇಶ ಮೂರ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು. ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಪ್ರಕಾಶ್ ಜಾವಡೇಕರ್, ಪುರಂದರೇಶ್ವರಿ, ಪಿಯು ಗೋಶಲ್, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸಪ್ರಸಾದ್, ಸಂಸದರಾದ ಶ್ರೀರಾಮುಲು, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಮಾಜಿ ಸಚಿವರಾದ ಸಿ.ಎಂ.ಉದಾಸಿ, ರಾಮದಾಸ್, ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ, ಶಾಸಕರಾದ ಆರ್.ಅಶೋಕ್, ಅರವಿಂದ ಲಿಂಬಾವಳಿ, ಸಿ.ಪಿ.ಯೋಗೇಶ್ವರ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೋಟೆ ಶಿವಣ್ಣ, ನಗರಾಧ್ಯಕ್ಷ ಡಾ.ಮಂಜುನಾಥ್, ಚಾಮರಾಜನಗರ ಜಿ.ಪಂ.ಅಧ್ಯಕ್ಷ ರಾಮಚಂದ್ರ ಫಣೀಶ್, ಎಲ್.ನಾಗೇಂದ್ರ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾವೇಶಕ್ಕೆ ಬಂದವರು ಬಾರ್ ಗೆ ಮುಗಿಬಿದ್ದರು!

ಬಿಜೆಪಿ ಸಮಾವೇಶಕ್ಕೆ ಆಗಮಿಸಿದ್ದ ಕೆಲವರು ರಾಮಸ್ವಾಮಿ ವೃತ್ತ ಬಳಿಯ ಬಾರ್ ಗೆ ಮುಗಿಬಿದ್ದಿದ್ದ ದೃಶ್ಯ ಕಂಡು ಬಂತು. ಕಾರ್ಯಕ್ರಮ 4 ಗಂಟೆಗೆ ಆರಂಭವಾಗುತ್ತದೆ ಎಂದು ತಿಳಯದೆ ತಮ್ಮ ನಾಯಕರ ಅಣತಿಯಂತೆ ಬೆಳಿಗ್ಗೆಯೇ ಬಂದಿದ್ದ ಬಿಜೆಪಿ ಕಾರ್ಯಕರ್ತರು, ಮಹರಾಜ ಕಾಲೇಜಿನ ವೇದಿಕೆ ಬಳಿಗೆ ಹೋಗಿ ಕಾರ್ಯಕ್ರಮ ಇನ್ನೂ ಪ್ರಾರಂಭವಾಗದಿರುವುದನ್ನು ಕಂಡು ಬಾರ್ ಗಳತ್ತ ಮಖ ಮಾಡಿದರು. ಕೆಲವರಂತೂ ಕಾರ್ಯಕ್ರಮ ಮುಗಿದ ನಂತರ ತಮ್ಮನ್ನು ಕರೆದುಕೊಂಡು ಬಂದಿದ್ದವರನ್ನು ಹುಡುಕುತ್ತಿದ್ದರು. 'ಬನ್ನೂರಿನ ಬಳಿಯ ನಡಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರು ನಮ್ಮನ್ನು ಬೆಳಿಗ್ಗೆಯೇ ಕರೆದುಕೊಂಡು ಬಂದಿದ್ದು, 200 ರೂ. ಕೊಡುತ್ತೇನೆ ಎಂದರು. ಆದರೆ ನಮ್ಮನ್ನು ಕರೆದುಕೊಂಡು ಬಂದ ವ್ಯಕ್ತಿ ಇನ್ನೂ ಸಿಕ್ಕಿಲ್ಲ. ಹಾಗಾಗಿ ಅವರನ್ನು ಹುಡುಕುತ್ತಿದ್ದೇವೆ ಎಂದು ಸಮಾವೇಶಕ್ಕೆ ಆಗಮಿಸಿದ್ದ ಓರ್ವ ವ್ಯಕ್ತಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X