Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಹಮ್ ಸಫರ್ ರೈಲು ಸೇವೆಗೆ ಚಾಲನೆ...

ಮೈಸೂರು: ಹಮ್ ಸಫರ್ ರೈಲು ಸೇವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು-ಮೈಸೂರು ನಡುವಿನ ರೈಲು ಮಾರ್ಗದ ವಿದ್ಯುದ್ದೀಕರಣ ಸಮರ್ಪಣೆ

ವಾರ್ತಾಭಾರತಿವಾರ್ತಾಭಾರತಿ19 Feb 2018 8:38 PM IST
share
ಮೈಸೂರು: ಹಮ್ ಸಫರ್ ರೈಲು ಸೇವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಮೈಸೂರು,ಫೆ.19: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೆ.ಎಸ್.ಆರ್. ಬೆಂಗಳೂರು ಮತ್ತು ಮೈಸೂರು ನಡುವೆ ರೈಲು ಮಾರ್ಗದ ವಿದ್ಯುದ್ದೀಕರಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದೇ ವೇಳೆ ಮೈಸೂರು ಮತ್ತು ರಾಜಸ್ಥಾನದ ಉದಯಪುರ ನಡುವೆ ಸಂಚರಿಸುವ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್ ಪ್ರೆಸ್ ರೈಲು ಸೇವೆಗೆ ಸೋಮವಾರ ಚಾಲನೆ ನೀಡಿದರು.

ಈ ಕುರಿತು ಹೇಳಿಕೆ ನೀಡಿದ ಸಚಿವ ಆರ್.ವಿ.ದೇಶಪಾಂಡೆ, ಬೆಂಗಳೂರು ಮತ್ತು ಮೈಸೂರು ನಡುವಿನ 138ಕಿ.ಮೀ ಉದ್ದದ ಜೋಡಿ ರೈಲ್ವೆ ನಿರ್ಮಾಣ ಮತ್ತು ವಿದ್ಯುದ್ದೀಕರಣ ರಾಜ್ಯ ಸರ್ಕಾರ ನೇತೃತ್ವದ ಮಹತ್ವದ ಸಾಧನೆಯಾಗಿದೆ ಎಂದರು. ಈ ಎರಡೂ ಯೋಜನೆಗಳನ್ನು ಕೇಂದ್ರ ಸರ್ಕಾರದ ರೈಲ್ವೆ ಇಲಾಖೆಯೊಂದಿಗೆ ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೊಂಡಿದ್ದು, ಯೋಜನೆಯ ಒಟ್ಟು ಮೊತ್ತ 999ಕೋ.ರೂಗಳಲ್ಲಿ ರಾಜ್ಯ ಸರ್ಕಾರದ ಪಾಲು 581ಕೋ.ರೂ.ಗಳಾಗಿದೆ. ಈ ಮಾರ್ಗದ ಜೋಡಿ ಹಳಿ ನಿರ್ಮಾಣ ಯೋಜನೆಯು ಮೂರು ಹಂತಗಳಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಪೂರ್ಣಗೊಂಡಿದೆ. ವಿದ್ಯುದ್ದೀಕರಣ ಯೋಜನೆಯನ್ನು 2010-11ರಲ್ಲಿ ಆರಂಭಿಸಿ ಈಗ ಪೂರ್ಣಗೊಳಿಸಲಾಗಿದೆ. ಆದರೆ ಮಧ್ಯದಲ್ಲಿ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಗೆ ಅಡ್ಡಲಾಗಿ 2ಸೇತುವೆಗಳನ್ನು ಕಟ್ಟಬೇಕಾದ್ದರಿಂದ ಮತ್ತು ಟಿಪ್ಪು ಶಸ್ತ್ರಾಗಾರವನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಶ್ರೀರಂಗಪಟ್ಟಣದ ಬಳಿ ಇದ್ದ ಸುಮಾರು 225 ವರ್ಷಗಳಷ್ಟು ಪುರಾತನವಾದ ಮತ್ತು ಚಾರಿತ್ರಿಕ ಸ್ಮಾರಕ ಟಿಪ್ಪು ಶಸ್ತ್ರಾಗಾರವು 900ಟನ್ ಭಾರವಿತ್ತು.ಇದಕ್ಕೆ ಸ್ವಲ್ಪವೂ ಧಕ್ಕೆ ಆಗದಂತೆ ಸಂಪೂರ್ಣ ಸುರಕ್ಷಿತವಾಗಿ ಸ್ಥಳಾಂತರಿಸಿದ್ದು, ಒಂದು ಮಹತ್ವದ ಸಾಧನೆಯಾಗಿದೆ ಎಂದರು.

ಕಳೆದ 2 -3ವರ್ಷಗಳಿಂದ ರಾಜ್ಯ ಸರ್ಕಾರವು ಈ ಕಾಮಗಾರಿಗೆ ವಿಶೇಷ ಒತ್ತನ್ನು ನೀಡಿ ಈ ಯೋಜನೆಯ ಅನುಷ್ಠಾನಕ್ಕೆ ವೇಗವನ್ನು ಒದಗಿಸಿತು. ಬೆಂಗಳೂರು-ಮೈಸೂರು ಮಾರ್ಗದ ಜೋಡಿ ರೈಲ್ವೆ ಹಳಿ ನಿರ್ಮಾಣ ಮತ್ತು ವಿದ್ಯುದ್ದೀಕರಣದಿಂದ ಈ ಎರಡೂ ನಗರಗಳ ನಡುವೆ ಪ್ರತಿನಿತ್ಯ ಓಡಾಡುವ ಸುಮಾರು 6ಸಾವಿರಕ್ಕಿಂತ ಹೆಚ್ಚಿನ ಮತ್ತು ಉಳಿದಂತೆ ಓಡಾಡುವ 25ಸಾವಿರಕ್ಕೂ ಹೆಚ್ಚು ಸಾಮಾನ್ಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಜೊತೆಗೆ ರೈಲ್ವೆ ಇಲಾಖೆಗೆ ವಾರ್ಷಿಕ 20ಕೋ.ರೂ ಉಳಿತಾಯವಾಗಲಿದೆ. ಅಲ್ಲದೇ ಎರಡೂ ನಗರಗಳ ನಡುವೆ ಹೆಚ್ಚಿನ ಸಂಖ್ಯೆಯ ರೈಲು ಓಡಾಟಕ್ಕೆ ಸುಗಮ ಸೌಲಭ್ಯ ಸಿಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ರಾಜ್ಯಪಾಲರಾದ ವಜುಭಾಯಿ ಆರ್. ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಅನಂತಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದರಾದ ಪ್ರತಾಪ್ ಸಿಂಹ, ಸಿ.ಎಸ್. ಪುಟ್ಟರಾಜು, ಕರ್ನಾಟಕದ ಮುಖ್ಯ ಕಾರ್ಯದರ್ಶಿ ರತ್ನಪ್ರಭ, ಮೇಯರ್ ಭಾಗ್ಯವತಿ, ಮೈಸೂರು ಜಿಲ್ಲಾಧಿಕಾರಿ ರಂದೀಪ್ ಡಿ. ಮುಂತಾದ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X