ಪ್ರಿಯಾ ವಾರಿಯರ್ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ
ಹೊಸದಿಲ್ಲಿ, ಫೆ.21:ಮಲಯಾಳಂ ಚಿತ್ರ ' ಒರು ಅಡಾರ್ ಲವ್' ಚಿತ್ರದ ಹಾಡಿನ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿರುವ ಕೇರಳದ ಯುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ತೆಲಂಗಾಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅವರು ಸೋಮವಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯವು ಪ್ರಿಯಾ ವಿರುದ್ಧ ದಾಖಲಾಗಿದ್ದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಗೂ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ.
Next Story