ಕಾನೂನು ಬಾಹಿರ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ: ಎಚ್.ಕೆ.ಪಾಟೀಲ್

ಬೆಂಗಳೂರು, ಫೆ.21: ಒತ್ತುವರಿ ಹಾಗೂ ಕಾನೂನು ಬಾಹಿರವಾಗಿ ಗಣಿಗಾರಿಕೆ ನಡೆಸುವವರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.
ಬುಧವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ವಿಜಯಾನಂದ ಕಾಶಪ್ಪನವರ್ ಕೇಳಿದ ಪ್ರಶ್ನೆಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ಪರವಾಗಿ ಅವರು ಉತ್ತರ ನೀಡಿದರು ರಾಯಚೂರು ಜಿಲ್ಲೆಯ ಮುದಗಲ್ ಗ್ರಾಮದಲ್ಲಿರುವ ಮೈಸೂರು ಮಿನರಲ್ಸ್‌ಗೆ ಸೇರಿದ ಸರ್ವೆ ನಂ 707-716 ಅನ್ನು ಅತಿಕ್ರಮ ಹಾಗೂ ಕಾನೂನು ಬಾಹಿರವಾಗಿ ವಶಕ್ಕೆ ತೆಗೆದುಕೊಂಡಿರುವುದರ ಕುರಿತು ಇಲಾಖೆಯ ನಿರ್ದೇಶಕರಿಂದ ತನಿಖೆ ನಡೆಸಿ ಸೂಕ್ತ ವರದಿ ಪಡೆದು ಕ್ರಮವಹಿಸಲಾಗುವುದು ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಅತ್ಯಂತ ಪ್ರಭಾವಿ ರಾಜಕಾರಣಿಯೊಬ್ಬರು ಸರಕಾರಿ ಜಮೀನು, ದಲಿತರ ಜಮೀನುಗಳನ್ನು ಅತಿಕ್ರಮಣ ಮಾಡಿಕೊಂಡು ಅಲ್ಲಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಸಂಬಂಧ ಸಂಪೂರ್ಣ ತನಿಖೆ ಆಗಬೇಕೆಂದು ವಿಜಯಾನಂದ ಕಾಶಪ್ಪನವರ್ ಒತ್ತಾಯಿಸಿದರು.
Next Story





