ವಿಧಾನಸಭೆಯಲ್ಲಿ ಎರಡು ವಿಧೇಯಕಕ್ಕೆ ಅನುಮೋದನೆ

ಬೆಂಗಳೂರು, ಫೆ. 21: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ’ಕ್ಕೆ ವಿಧಾನಸಭೆ ಧ್ವನಿಮತದ ಅಂಗೀಕಾರ ನೀಡಲಾಯಿತು.
ಬುಧವಾರ ಶಾಸನ ರಚನಾ ಕಲಾಪದಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಂಡಿಸಿದ ಎರಡೂ ವಿಧೇಯಕಗಳಿಗೂ ಸ್ಪೀಕರ್ ಕೋಳಿವಾಡ ಅವರು ಧ್ವನಿಮತದ ಮೂಲಕ ಅನುಮೋದನೆ ನೀಡಿದರು.
ಸಂಗೊಳ್ಳಿ ರಾಯಣ್ಣ ಪ್ರಾಧಿಕಾರಕ್ಕೆ ಬೆಳಗಾವಿ ಜಿಲ್ಲಾಧಿಕಾರಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲು ಅವಕಾಶ ಹಾಗೂ ಕಾನೂನು ವಿವಿ ಲೆಕ್ಕ ಪರಿಶೋಧಕರ ವರದಿಯನ್ನು ಸರಕಾರಕ್ಕೆ ಕಳುಹಿಸಿಕೊಡಬೇಕು ಎಂಬ ತಿದ್ದುಪಡಿ ಒಳಗೊಂಡಿವೆ ಎಂದು ಉಲ್ಲೇಖಿಸಲಾಗಿದೆ.
Next Story





