Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸುಗಮ್ಯ ಚುನಾವಣೆಗೆ ಸೂಕ್ತ...

ಉಡುಪಿ: ಸುಗಮ್ಯ ಚುನಾವಣೆಗೆ ಸೂಕ್ತ ಕ್ರಿಯಾಯೋಜನೆ ರೂಪಿಸಲು ಕರೆ

ವಾರ್ತಾಭಾರತಿವಾರ್ತಾಭಾರತಿ21 Feb 2018 9:18 PM IST
share
ಉಡುಪಿ: ಸುಗಮ್ಯ ಚುನಾವಣೆಗೆ ಸೂಕ್ತ ಕ್ರಿಯಾಯೋಜನೆ ರೂಪಿಸಲು ಕರೆ

ಉಡುಪಿ, ಫೆ.21: ಚುನಾವಣಾ ಆಯೋಗವು ಪ್ರಸಕ್ತ ಚುನಾವಣೆಯಲ್ಲಿ ಸುಗಮ್ಯ ಚುನಾವಣೆ ಘೋಷವಾಕ್ಯದಡಿ ಜಿಲ್ಲೆಯಲ್ಲಿರುವ ವಿಕಲಚೇತನರು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಪೀಡಿತರಿಗೆ ಮತದಾನ ಮಾಡಲು ಸಹಾಯವಾಗುವಂತೆ ಪೂರಕ ವ್ಯವಸ್ಥೆಗಳನ್ನು ರೂಪಿಸಲು ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್  ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದ ಸಭೆಯಲ್ಲಿ ನಿಷ್ಪಕ್ಷ ಸ್ವಯಂಸೇವಕರಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಹಾಗೂ ಲಯನ್ಸ್, ರೋಟರಿ, ರೆಡ್‌ಕ್ರಾಸ್ ನೆರವಿನೊಂದಿಗೆ ಎನ್‌ವೈಕೆ ಸಹಯೋಗವನ್ನು ಪಡೆಯಲು ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಿದರು.

ಚುನಾವಣಾ ಆಯೋಗದ ಶಿಫಾರಸ್ಸಿನಂತೆ ಜಿಲ್ಲೆಯಲ್ಲಿ ಇರುವ ವಿಶೇಷ ಚೇತನರಿಗೆ, ಹಿರಿಯ ನಾಗರಿಕರಿಗೆ, ಅಸ್ವಸ್ಥರಿಗೆ ಮತದಾನ ಸುಲಭವಾಗಿಸಲು ಈಗಾಗಲೇ ಜಿಲ್ಲೆಯಲ್ಲಿ ಆಯಾ ಬೂತ್‌ಗಳಲ್ಲಿ ಹೆಸರುಗಳನ್ನು ಪಟ್ಟಿ ಮಾಡಿದ್ದು, ಮಾಹಿತಿ ಪಡೆದುಕೊಂಡು ಕಾರ್ಯಗತಗೊಳಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಕಲಚೇತನರಿಗೆ ಸಹಾಯವಾಗುವಂತೆ, ಆಯಾ ಮತಗಟ್ಟೆಗಳಲ್ಲಿ ವೀಲ್ ಚಯರ್, ರ್ಯಾಂಪ್‌ಗಳನ್ನು ನಿರ್ಮಿಸಲಾಗುವುದು. ಅಂಧ ಮತದಾರರಿಗೆ ಬ್ರೈನ್‌ಲಿಪಿಯ ಮೂಲಕ ಮತ ಹಾಕಲು ನೆರವಾಗುವ ವ್ಯವಸ್ಥೆಗಳನ್ನು ಮಾಡಲಾಗುವುದು. ಸುಗಮ್ಯ ಚುನಾವಣೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅರ್ಹರಿಗೆ ವಿಶೇಷ ಪಾಸುಗಳನ್ನು ನೀಡಿ ಅವರು ಸರತಿ ಸಾಲಿನಲ್ಲಿ ನಿಲ್ಲದಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಈ ಸಂಬಂಧ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಇನ್ನೊಂದು ಸುತ್ತಿನ ಸಭೆ ನಡೆಸಿ ಗೊಂದಲರಹಿತ ಕ್ರಿಯಾ ಯೋಜನೆ ರೂಪಿಸಿ ಎಂದರು. ವಿಶೇಷ ಪೋಲಿಂಗ್ ಬೂತ್‌ಗಳನ್ನು ಅವಶ್ಯವಿದ್ದಲ್ಲಿ ರಚಿಸಲು ಅವಕಾಶವಿದ್ದು, ಅದಕ್ಕೂ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಜಿಪಂನ ಸಿಇಒ ಶಿವಾನಂದ ಕಾಪಸಿ ಹಾಗೂ ಇತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X