Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುಟ್ಟಣ್ಣಯ್ಯ ಅಂತ್ಯ ಸಂಸ್ಕಾರಕ್ಕೆ 30...

ಪುಟ್ಟಣ್ಣಯ್ಯ ಅಂತ್ಯ ಸಂಸ್ಕಾರಕ್ಕೆ 30 ಜಿಲ್ಲೆಯ ಮಣ್ಣು: ಬಡಗಲಪುರ ನಾಗೇಂದ್ರ

ವಾರ್ತಾಭಾರತಿವಾರ್ತಾಭಾರತಿ21 Feb 2018 10:08 PM IST
share
ಪುಟ್ಟಣ್ಣಯ್ಯ ಅಂತ್ಯ ಸಂಸ್ಕಾರಕ್ಕೆ 30 ಜಿಲ್ಲೆಯ ಮಣ್ಣು: ಬಡಗಲಪುರ ನಾಗೇಂದ್ರ

ಮೈಸೂರು,ಫೆ.21: ಇತ್ತೀಚೆಗೆ ನಿಧನರಾದ ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯನವರ ಅಂತ್ಯ ಸಂಸ್ಕಾರ ನಾಳೆ ಮಧ್ಯಾಹ್ನ 12 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ಯಾತಮಾರನಹಳ್ಳಿಯ ಶ್ರಿಯುತರ ತೋಟದಲ್ಲಿ ನೆರವೇರಿಸಲಾಗುವುದು ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಎಸ್‍ಎಸ್ ಕಾಲೇಜಿನಲ್ಲಿರುವ ಪುಟ್ಟಣ್ಣಯ್ಯನವರ ಪಾರ್ಥವ ಶರೀರವನ್ನು ನಾಳೆ ಬೆಳಗ್ಗೆ 6 ಗಂಟೆಗೆ ಕ್ಯಾತಮಾರನಹಳ್ಳಿಗೆ ಕೊಂಡೊಯ್ಯಲಿದ್ದು, ಅಲ್ಲಿ ಕುಟುಂಬ ಸದಸ್ಯರು ಅಂತಿಮ ನಮನ ಸಲ್ಲಿಸಿದ ನಂತರ ಪಾಂಡವಪುರದ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಬೆಳಗ್ಗೆ 10.30ರವರೆಗೆ ಅವಕಾಶ ನೀಡಲಾಗುವುದು. ನಂತರ 12 ಗಂಟೆಯೊಳಗೆ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಪುಟ್ಟಣ್ಣಯ್ಯನವರ ಅಂತ್ಯ ಸಂಸ್ಕಾರದ ವಿವರ ನೀಡಿದರು.

ಅಂತ್ಯ ಸಂಸ್ಕಾರಕ್ಕೆ ಜಿಲ್ಲಾಡಳಿತ ಈಗಾಗಲೇ ಸಿದ್ಧತೆ ನಡೆಸಿದ್ದು, ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ವಿವಿಧ ಜಿಲ್ಲೆಯ ರೈತರು ತಮ್ಮ ನೆಲದ ಒಂದು ಹಿಡಿ ಮಣ್ಣನ್ನು ತರಲಿದ್ದು, ಸುಮಾರು 30 ಜಿಲ್ಲೆಯ ಮಣ್ಣು ನಾಳೆ ಸೇರಲಿದೆ. ಅಲ್ಲದೇ ಯಾವುದೇ ವೈದಿಕ ಪದ್ಧತಿಯಿಲ್ಲದೆ ಅವರಿಚ್ಚೆಯಂತೆ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ ಎಂದು ಹೇಳಿದರು.

ಅಂತ್ಯ ಸಂಸ್ಕಾರದಲ್ಲಿ ಸ್ವರಾಜ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಯೋಗೇಂದ್ರ ಯಾದವ್, ರಾಜ್ಯಾಧ್ಯಕ್ಷ  ಪ್ರೊ.ಅಜೀಜ್ ಜಾ, ಜೈ ಕಿಸಾನ್ ಆಂದೋಲನದ ರಾಷ್ಟ್ರಿಯ ಅಧ್ಯಕ್ಷ ಅವೀಕ್ಷಾ, ಅಗ್ನಿಶ್ರೀಧರ್, ಸಚಿವ ರಮೇಶ್ ಕುಮಾರ್ ಸೇರಿದಂತೆ ಹಲವಾರು ರಾಷ್ಟ್ರ ನಾಯಕರು, ಜನಪ್ರತಿನಿಧಿಗಳು ಭಾಗಿಯಾಗುವರು ಎಂದು ತಿಳಿಸಿದರು.

ಅಂತ್ಯ ಸಂಸ್ಕಾರ ನಂತರ ಮುಂದಿನ ರೂಪುರೇಷಗಳ ಬಗ್ಗೆ ಚರ್ಚಿಸಲು ಮಧ್ಯಾಹ್ನ 3.30ಕ್ಕೆ ರಾಜ್ಯ ರೈತ ಸಂಘದ ತುರ್ತು ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ. ಫೆ.27ರಂದು ನಗರದ ಕೃಷಿ ಮಾರುಕಟ್ಟೆ ಸಮಿತಿಯಲ್ಲಿ ಪುಟ್ಟಣ್ಣಯ್ಯನವರ ಶ್ರದ್ದಾಂಜಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಫೆ.28ರಂದು ಕ್ಯಾತಮಾರನಹಳ್ಳಿಯ ಕ್ರೀಡಾಂಗಣದಲ್ಲಿ ವಿವಿದ ಕ್ಷೇತ್ರದ ಸಾಧಕರಿಗೆ ಕಾಯಕ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಗೋಪಾಲ ವಸಂತ ಕುಮಾರ್, ಮಂಡಕಳ್ಳಿ ಮಹೇಶ್, ನಾಗನಹಳ್ಳಿ ವಿಜಯೇಂದ್ರ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X