Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಅಂಚೆ ಪಾಸ್‍ಪೋರ್ಟ್ ಸೇವಾ...

ದಾವಣಗೆರೆ: ಅಂಚೆ ಪಾಸ್‍ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ21 Feb 2018 10:42 PM IST
share
ದಾವಣಗೆರೆ: ಅಂಚೆ ಪಾಸ್‍ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆ

ದಾವಣಗೆರೆ,ಫೆ.21: ನಗರದಲ್ಲಿ ಅಂಚೆ ಪಾಸ್‍ಪೋರ್ಟ್ ಸೇವಾಕೇಂದ್ರ ಪ್ರಾರಂಭದಿಂದ ಸ್ಮಾರ್ಟ್ ಸಿಟಿಗೆ ಮತ್ತೊಂದು ಗರಿ ಮೂಡಿದಂತಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.  

ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ನೂತನವಾಗಿ ಪ್ರಾರಂಭಿಸಲಾಗುತ್ತಿರುವ ಅಂಚೆ ಪಾಸ್‍ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯು ಪ್ರಮುಖ ವಿದ್ಯಾ ಕೇಂದ್ರ ಮತ್ತು ವಾಣಿಜ್ಯ ನಗರಿ ಆಗಿರುವುದರಿಂದ ಹೊರದೇಶಗಳಿಂದ ವಿದ್ಯಾರ್ಥಿಗಳು ಹಾಗೂ ವಾಣಿಜ್ಯೋದ್ಯಮಿಗಳು ನಿರಂತರವಾಗಿ ಆಗಮಿಸುತ್ತಿರುತ್ತಾರೆ. ಅಲ್ಲದೆ, ಇಲ್ಲಿನ ಉದ್ಯೋಗಸ್ಥರು ಹೊರದೇಶಗಳಿಗೆ ಹೆಚ್ಚಾಗಿ ಹೋಗುತ್ತಿದ್ದಾರೆ. ಹಾಗಾಗಿ, ಇಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಯಾಗಬೇಕೆಂದು ಕ್ಷೇತ್ರದ ಜನತೆಯ ಒತ್ತಾಸೆಯಾಗಿತ್ತು. ಕೇಂದ್ರ ಸರ್ಕಾರದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಜಿಲ್ಲೆಯಲ್ಲಿ ಪಾಸ್‍ಪೋರ್ಟ್ ಸೇವಾಕೇಂದ್ರದ ಅವಶ್ಯಕತೆಯಿದೆ ಎಂದು ಬೇಡಿಕೆ ಇಟ್ಟು ಅದನ್ನು ನೆರವೇರಿಸಿದ ಸಂತೃಪ್ತಿ ನನಗಿದೆ ಎಂದು ಸಂತಸ ವ್ಯಕ್ತಪಡಿಸಿದರು.   

ಮಧ್ಯಕರ್ನಾಟಕ ಭಾಗದಲ್ಲಿ ಅಚ್ಚ ಕನ್ನಡ ಭಾಷೆಯ ಬಳಕೆಯೇ ಹೆಚ್ಚು. ಹಾಗೂ ಗ್ರಾಮೀಣ ಪ್ರದೇಶದಿಂದ ಬರುವವರ ಸಂಖ್ಯೆಯೂ ಹೆಚ್ಚಾಗಿದ್ದು, ಈ ಸೇವಾಕೇಂದ್ರ ಕನ್ನಡ ಬರುವಂತಹ ಅಧಿಕಾರಿಗಳನ್ನು ನೇಮಿಸುವ ಮೂಲಕ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಉತ್ತಮ ಸೇವೆ ಒದಗಿಸಬೇಕಾಗಿದೆ. ಅಲ್ಲದೇ ಕರ್ನಾಟಕದಲ್ಲಿಯೇ ದಾವಣಗೆರೆ ಅಂಚೆಕಚೇರಿಯ  ಮಾದರಿ ಅಂಚೆ ಪಾಸ್‍ಪೋರ್ಟ್ ಸೇವಾಕೇಂದ್ರವನ್ನಾಗಿ ರೂಪಿಸಬೇಕೆಂದು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದಿಂದ ಮುಂದಿನ ದಿನಗಳಲ್ಲಿರಾಷ್ಟ್ರೀಯ ಬುದ್ಧಿಮಾಂದ್ಯ ಮಕ್ಕಳ ಚಿಕಿತ್ಸಾ ಕೇಂದ್ರವನ್ನು ಹಾಗೂ ಪ್ರಧಾನ ಮಂತ್ರಿ ಕೌಶಲ್ಯ ತರಬೇತಿ ಕೇಂದ್ರವನ್ನು ಆರಂಭಿಸಲಾಗುವುದು. ಕೇಂದ್ರ ಸರ್ಕಾರದ ಸಿಆರ್‍ಎಫ್ ಅನುದಾನದಡಿ ರಸ್ತೆಗಳ ಅಭಿವೃದ್ಧಿಗೆ ಹಣ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಚಿತ್ರದುರ್ಗ-ಕುಮುಟ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರ ಮಂಜೂರಾತಿ ನೀಡಿ ಒಪ್ಪಿಗೆ ಸೂಚಿಸಿದೆ. ಅಲ್ಲದೇ ಹರಿಹರದಲ್ಲಿ 01 ಎಥೆನಾಲ್ ಘಟಕಗಳನ್ನು ಪ್ರಾರಂಭಿಸುವ ಉದ್ದೇಶ ಹೊಂದಿದ್ದು, ಇದಕ್ಕಾಗಿ ರೂ.960 ಕೋಟಿ ಅನುದಾನ ಬಿಡುಗಡೆಯಾಗಿದೆ ಹಾಗೂ ಕೆಐಎಡಿಬಿ ವತಿಯಿಂದ 50 ಎಕರೆ ಜಮೀನು ಸಹ ಮಂಜೂರಾಗಿದೆ. ಇದರಿಂದ 80 ಜನರಿಗೆ ಉದ್ಯೋಗವಕಾಶ ಸಿಗುತ್ತದೆ ಎಂದು ಹೇಳಿ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿದರು. 

ಬೆಂಗಳೂರು ವಿಭಾಗೀಯ ಪಾಸ್‍ಪೋರ್ಟ್ ಕಚೇರಿಯ ಐಎಫ್‍ಎಸ್ ಅಧಿಕಾರಿ ಭರತ್‍ಕುಮಾರ್ ಕುತಟಿ ಮಾತನಾಡಿ, ಪಾಸ್‍ಪೋರ್ಟ್‍ಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ ನಂತರದ 10 ದಿನಗಳ ಒಳಗಾಗಿ ಪಾಸ್‍ಪೋರ್ಟ್ ವಿತರಣೆ ಮಾಡಲಾಗುವುದು. ಒಂದು ವೇಳೆ ಅರ್ಜಿದಾರರಿಗೆ ಪೊಲೀಸ್ ಪರಿಶೀಲನೆಗೊಳಪಡಿಸಿದರೆ 30 ದಿನಗಳೊಗಾಗಿ ವಿತರಣೆ ಹಾಗೂ ತಾತ್ಕಾಲಿಕ ಪಾಸ್‍ಪೋರ್ಟ್ ಗೆಜೆಟೆಡ್ ಅಧಿಕಾರಿಗಳ ಸಹಿಯೊಂದಿಗೆ 3-4 ದಿನಗಳೊಳಗಾಗಿ ವಿತರಣೆ ಮಾಡಲಾಗುವುದು. ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. 

ಜಿ.ಪಂ ಅಧ್ಯಕ್ಷೆ ಮಂಜುಳಾ ಟಿ.ವಿ.ರಾಜು, ಮೇಯರ್ ಅನಿತಾಬಾಯಿ ಮಾಲತೇಶ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತ್‍ರಾವ್ ಜಾಧವ್, ಜಿ.ಪಂ.ಸದಸ್ಯೆ ಶೈಲಜಾ ಬಸವರಾಜ್, ದಕ್ಷಿಣ ಕರ್ನಾಟಕ ವಿಭಾಗೀಯ ಅಧಿಕಾರಿ ಎಸ್. ರಾಜೇಂದ್ರ ಕುಮಾರ್, ಚಿತ್ರದುರ್ಗ ಅಂಚೆಕಚೇರಿಯ ಅಧೀಕ್ಷಕ ಎನ್ ಬಿ ಬಸನಕಟ್ಟಿ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X