ಶಿರಿಯಾರ ಅಕ್ರಮ ಮರಳುಗಾರಿಗೆ ದಾಳಿ
ಕೋಟ, ಫೆ.21: ಶಿರಿಯಾರ ಗ್ರಾಮದ ಸಕ್ಕಟ್ಟು ಹೊಳೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆಗೆ ಫೆ.20ರಂದು ಸಂಜೆ ವೇಳೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೊತ್ತುಗಳನ್ನು ವಶಪಡಿಸಿಕೊಂಡಿದೆ.
ಖಚಿತ ಮಾಹಿತಿಯಂತೆ ಗಣಿ ಮತ್ತು ಭೂ ವಿಜ್ಞಾನಿ ಮಹೇಶ್ ನೇತೃತ್ವದಲ್ಲಿ ಕೋಟ ಪೊಲೀಸರು, ಶಿರಿಯಾರ ಪಿಡಿಓ, ಗ್ರಾಮ ಲೆಕ್ಕಾಧಿಕಾರಿ ಹಾಗೂ ಗ್ರಾಮಸ್ಥರು ಶಿರಿಯಾರದ ಸಂತೋಷ್ ನಡೆಸುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿ ಮರಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





