Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಪತ್ರಕರ್ತನೊಬ್ಬನ ಜೀವನೋತ್ಸಾಹ

ಪತ್ರಕರ್ತನೊಬ್ಬನ ಜೀವನೋತ್ಸಾಹ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ22 Feb 2018 12:14 AM IST
share
ಪತ್ರಕರ್ತನೊಬ್ಬನ ಜೀವನೋತ್ಸಾಹ

ಪತ್ರಿಕೋದ್ಯಮದಲ್ಲಿ ‘ಪಗೋ’ ಎಂದೇ ಗುರುತಿಸಲ್ಪಡುವ ಪದ್ಯಾಣ ಗೋಪಾಲಕೃಷ್ಣ ಅವರು 1956ರಲ್ಲಿ ಕನ್ನಡ ದಿನ ಪತ್ರಿಕೆ ‘ವಿಶ್ವ ಕರ್ನಾಟಕ’ ಮುಖಾಂತರ ಗುರುತಿಸಿಕೊಂಡವರು. ಮುಂದೆ ತಾಯಿನಾಡು, ಕಾಂಗ್ರೆಸ್ ಸಂದೇಶ, ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲೂ ಸೇವೆ ಸಲ್ಲಿಸಿದರು. 1959ರ ಸುಮಾರಿಗೆ ಮಂಗಳೂರಿಗೆ ಬಂದು ನೆಲೆಸಿ ನವಭಾರತ, ಕನ್ನಡ ವಾಣಿ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿ, ಆನಂತರ ಇಂಡಿಯನ್ ಎಕ್ಸ್‌ಪ್ರೆಸ್, ಕನ್ನಡ ಪ್ರಭ, ಸಂಯುಕ್ತ ಕರ್ನಾಟಕ, ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗಳ ಮಂಗಳೂರು ವರದಿಗಾರರಾಗಿ ಕೆಲಸ ಮಾಡಿದರು. ಬಳಿಕ ಅಂಣಕಾರರಾಗಿಯೂ ಗುರುತಿಸಿಕೊಂಡರು.

  ಪತ್ರಕರ್ತನ ಬದುಕು ಹೊರಗೆ ನೋಡಿದಾಗ ಅತ್ಯಂತ ರಮ್ಯ ಮತ್ತು ರೋಚಕವಾಗಿರುತ್ತದೆ. ಆದರೆ ಆತ ತನ್ನ ವೈಯಕ್ತಿಕವಾದ ಎಲ್ಲ ಬದುಕನ್ನು ಒತ್ತೆಯಿಟ್ಟು ಪತ್ರಿಕೆಗೆ ತನ್ನನ್ನು ಅರ್ಪಿಸಿಕೊಳ್ಳಬೇಕಾಗುತ್ತದೆ. ಡೆಡ್‌ಲೈನ್‌ನ ಕತ್ತಿಮೇಲೆ ನಡೆಯುತ್ತಾ ಸುದ್ದಿಗಳನ್ನು ಸಮಯಕ್ಕೆ ಸರಿಯಾಗಿ ನೀಡಬೇಕಾಗುತ್ತದೆ. ಇದೇ ಸಂದರ್ಭದಲ್ಲಿ ಪತ್ರಿಕೆಯ ಸಂಪಾದಕರ ಜೊತೆಗೆ, ಮಾಲಕರ ಜೊತೆಗೂ ಅವರು ಮುಖಾಮುಖಿಯಾಗಬೇಕಾಗುತ್ತದೆ. 50ರ ದಶಕದಲ್ಲಿ ತಂತ್ರಜ್ಞಾನ ಇಷ್ಟು ಅಭಿವೃದ್ಧಿಗೊಂಡಿರಲಿಲ್ಲ. ಮೊಬೈಲ್‌ಗಳು ಬಿಡಿ, ದೂರವಾಣಿಯೇ ಇರಲಿಲ್ಲ. ಫೋಟೊಗಳನ್ನು ತೆಗೆಯುವ, ಅದನ್ನು ಕಚೇರಿಗೆ ರವಾನಿಸುವ ಸುಲಭ ವ್ಯವಸ್ಥೆಯೂ ಇದ್ದಿರಲಿಲ್ಲ. ಸಾರಿಗೆ ಸಂಪರ್ಕದ ಕೊರತೆಯೂ ಇತ್ತು. ಇವೆಲ್ಲವುಗಳ ನಡುವೆ ಒಬ್ಬ ವರದಿಗಾರ ತನ್ನ ವರದಿಯನ್ನು ತಯಾರಿಸಬೇಕಾಗಿತ್ತು. ಈ ಎಲ್ಲ ಅನುಭವಗಳು ಇಂದಿನ ಪತ್ರಕರ್ತರಿಗೆ ಒಂದು ಆದರ್ಶವಾಗಿದೆ. ಇಂದು ಇಂಟರ್‌ನೆಟ್, ವಿಕಿಪೀಡಿಯಾ, ಗೂಗಲ್‌ಗಳನ್ನು ಆಧರಿಸಿಕೊಂಡು ಪತ್ರಕರ್ತರಾಗುವುದು ತುಂಬಾ ಸುಲಭ. ಸಾಮಾಜಿಕ ತಾಣಗಳಲ್ಲಿ ನಾಲ್ಕು ಬರಹಗಳನ್ನು ಬರೆದಾಕ್ಷಣ ತನಗೆ ತಾನೇ ಲೇಖಕನಾಗಿ ಬಿಡುತ್ತಾನೆ. ಇಂತಹ ಸಂದರ್ಭದಲ್ಲಿ ನಿಜವಾದ ಅರ್ಥದಲ್ಲಿ ಎಲ್ಲ ತೊಡಕುಗಳು ಸವಾಲುಗಳನ್ನು ಎದುರಿಸಿ ಪತ್ರಕರ್ತರಾಗಿ ಗುರುತಿಸಿಕೊಂಡ ಹಿರಿಯರ ನೆನಪುಗಳನ್ನು ಓದುವುದು ಅತ್ಯಗತ್ಯ. ಈ ಕಾರಣದಿಂದ ಪದ್ಯಾಣ ಗೋಪಾಲಕೃಷ್ಣ ಅವರ ಜೀವನೋತ್ಸಾಹದ ಸಂಕಥನ ‘‘ಅನುಭವ ಅನುಭಾವಗಳ ನಡುವೆ’’ ಕೃತಿ ಮುಖ್ಯವಾಗುತ್ತದೆ.
ಪಗೋ ಅವರ ಬರಹಗಳು ವಿಶಿಷ್ಟ ಮತ್ತು ಕಚಗುಳಿ ಇಡುತ್ತವೆ ಮಾತ್ರವಲ್ಲ, ಅಷ್ಟೇ ಹರಿತವಾದ ವ್ಯಂಗ್ಯವನ್ನು ಹೊಂದಿವೆ. ಪತ್ರಿಕೋದ್ಯಮದೊಳಗಿರುವ ಕಷ್ಟ ಕಾರ್ಪಣ್ಯ ಮಾತ್ರವಲ್ಲ, ಇತರ ರಾಜಕೀಯಗಳನ್ನೂ ಈ ಕೃತಿ ಸರಳವಾಗಿ ತೆರೆದಿಡುತ್ತದೆ. ಜೀವನೋತ್ಸಾಹ ಮತ್ತು ಜೀವ ಕಾರುಣ್ಯ ಅವರ ಬರಹದ ಹೆಗ್ಗಳಿಕೆ. ಕಾಂತಾವರ ಕನ್ನಡ ಸಂಘದ ಸಂಸ್ಕೃತಿ ಸಂವರ್ಧನ ಮಾಲೆಯ ಭಾಗವಾಗಿ ಈ ಕೃತಿ ಹೊರ ಬಂದಿದೆ. ಪಾಂಚಜನ್ಯ ಪಬ್ಲಿಕೇಶನ್ ಕೃತಿಯನ್ನು ಮುದ್ರಿಸಿದೆ. 120 ಪುಟಗಳ ಈ ಕೃತಿಯ ಮುಖಬೆಲೆ 125 ರೂಪಾಯಿ. ಆಸಕ್ತರು 8242485539 ೂರವಾಣಿಯನ್ನು ಸಂಪರ್ಕಿಸಬಹುದು.

 

share
-ಕಾರುಣ್ಯ
-ಕಾರುಣ್ಯ
Next Story
X