ಆಸ್ಪತ್ರೆಯಿಂದ ಬಿಡುಗಡೆಯಾದ ಗೋವಾ ಸಿಎಂ ಮನೋಹರ್ ಪಾರಿಕ್ಕರ್
ಹೊಸದಿಲ್ಲಿ, ಫೆ.22: ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಸಿಎಂ ಮನೋಹರ್ ಪಾರಿಕ್ಕರ್ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಗೋವಾ ಅಸೆಂಬ್ಲಿ ಕಟ್ಟಡದೊಳಕ್ಕೆ ಅವರು ಪ್ರವೇಶಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೇದೋಜೀರಕ ಗ್ರಂಥಿಯ ಉರಿಯೂತಕ್ಕಾಗಿ ಪಾರಿಕ್ಕರ್ ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಆಸ್ಪತ್ರೆಯ ವೈದ್ಯರು ಮಾಧ್ಯಮಗಳ ವರದಿ ಸುಳ್ಳೆಂದು ತಿಳಿಸಿದ್ದರು.
ಗೋವಾದ ವಾರ್ಷಿಕ ಬಜೆಟನ್ನು ಮನೋಹರ್ ಪಾರಿಕ್ಕರ್ ಮಂಡಿಸಲಿದ್ದಾರೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
Next Story