Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪರಾಧಿಗಳು ಧರ್ಮವನ್ನು ಹೈಜಾಕ್...

ಅಪರಾಧಿಗಳು ಧರ್ಮವನ್ನು ಹೈಜಾಕ್ ಮಾಡಿಕೊಂಡಿದ್ಧಾರೆ: ಮುಹಮ್ಮದ್ ಕುಂಞಿ

ಶಿರಾಲಿಯಲ್ಲಿ ಸೌಹಾರ್ದ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ22 Feb 2018 4:48 PM IST
share
ಅಪರಾಧಿಗಳು ಧರ್ಮವನ್ನು ಹೈಜಾಕ್ ಮಾಡಿಕೊಂಡಿದ್ಧಾರೆ: ಮುಹಮ್ಮದ್ ಕುಂಞಿ

ಭಟ್ಕಳ, ಫೆ. 22: ಗೂಂಡಾಗಳು, ಕ್ರಿಮಿನಲ್ಸ್ ಗಳು, ಕಳ್ಳತನ, ಕೊಲೆ ಸುಲಿಗೆಯಂತಹ ಅಪರಾಧಗಳ ಪ್ರಕರಣ ಎದುರಿಸುತ್ತಿರುವವರು ಧರ್ಮವನ್ನು ಹೈಜಾಕ್ ಮಾಡಿದ ಕಾರಣಕ್ಕೆ ಇಂದು ಧರ್ಮ ಎನ್ನುವುದು ಅಪಾರ್ಥಕ್ಕೊಳಗಾಗಿದೆ ಎಂದು ಮಂಗಳೂರು ಶಾಂತಿ ಪ್ರಕಾಶನ ಸಂಸ್ಥೆಯ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಹೇಳಿದರು.

ಅವರು ಬುಧವಾರ ಸಂಜೆ ತಾಲೂಕಿನ ಶಿರಾಲಿಯ ಜನತಾ ವಿದ್ಯಾಲಯ ಪ್ರೌಢಶಾಲೆಯ ಮೈದಾನದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಹಾಗೂ ಜಮಾಅತುಲ್ ಮುಸ್ಲಿಮೀನ್ ತಟ್ಟಿಹಕ್ಕಲ್ ಶಿರಾಲಿಯ ಸಂಯುಕ್ತ ಆಶ್ರಯದಲ್ಲಿ ಜರಗಿದ ಹಲವು ಧರ್ಮಗಳು ಒಂದು ಭಾರತ ಎಂಬ ಘೋಷಣೆಯಡಿ ಸೌಹಾರ್ದ ಸಮಾವೇಶದಲ್ಲಿ ಮಾತನಾಡಿದರು.

ಧರ್ಮವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕ್ರಿಮಿನಲ್ಸ್ ಗಳು ಅಧಿಕಾರ ಪಡೆಯಲು ಅಥವಾ ಯಾರನ್ನಾದರೂ ಅಧಿಕಾರದಿಂದ ಕೆಳಗಿಳಿಸಲು ಧರ್ಮ ವೊಂದನ್ನು ಮಾಧ್ಯಮವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಆದ್ದರಿಂದ ಧರ್ಮದ  ನೈಜ ಸಂದೇಶವನ್ನು ಜನರಿಗೆ ತಲುಪಿಸುವ ಕಾರ್ಯವಾಗಬೇಕಾಗಿದೆ ಎಂದ ಅವರು, ವೈವಿಧ್ಯತೆ ಎನ್ನುವುದು ಈ ಜಗತ್ತಿನ ನಿಯಮವಾಗಿದ್ದು ಈ ಮಣ್ಣಿನಲ್ಲಿ ಅದರ ಗುಣ ಅಡಗಿದೆ. ಹಲವು ಧರ್ಮ, ಸಿದ್ಧಾಂತಗಳಿರುವ ಮಣ್ಣಿನಲ್ಲಿ ಬುದಕುತ್ತಿದ್ದು ಧರ್ಮಗಳನ್ನು ಒಳಿತಿನ ಕೆಲಸಕ್ಕೆ ಬಳಸಿಕೊಳ್ಳುವುದನ್ನು ಬಿಟ್ಟು ಅದನ್ನು ವಿನಾಶದ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದೇವೆ ಎಂದು ವಿಷಾಧಿಸಿದರು.

ದೇಶ ಪ್ರೇಮವೆಂದರೆ ಒಂದುಗೂಡುವಿಕೆ, ಬೆರೆಯುವಿಕೆಯಾಗಿದೆ. ಎಲ್ಲ ಧರ್ಮ, ಜಾತಿ, ಭಾಷೆ, ವರ್ಣದ ಜನರು ಒಂದುಗೂಡುವುದು ದೇಶಪ್ರೇಮವೆಂದು ಬಲವಾಗಿ ನಂಬಿದ ನಾವು ಇಂಹತ ಧರ್ಮವನ್ನು ತಿಳಿಸುವ ಮತ್ತು ತಿಳಿಯುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು ಎಂದು ಕರೆ ನೀಡಿದರು.

ಜಗತ್ತಿನ ಸೃಷ್ಟಿಗಳೆಲ್ಲವೂ ಪರಸ್ಪರ ಸಹಕಾರ, ಸಹಬಾಳ್ವೆಯಿಂದ ಬದುಕುತ್ತಿವೆ ಆದರ ಮನುಷ್ಯ ಮಾತ್ರ ಧರ್ಮ, ಭಾಷೆ, ಜಾತಿಯ ಆಧಾರದಲ್ಲಿ ಕಚ್ಚಾಡುತ್ತಿದ್ದು ಸಂಘರ್ಷಕ್ಕೆ ಕಾರಣವಾಗಿದ್ದಾನೆ ಎಂದ ಅವರು, ಮನುಷ್ಯ ಮನುಷ್ಯರನ್ನು ಪ್ರೀತಿಸುವ ಕಾರ್ಯವಾಗಬೇಕು, ಧರ್ಮಗ್ರಂಥಗಳು ಕೇವಲ ಪಾರಾಯಣಕ್ಕೆ ಮಾತ್ರ ಸೀಮಿತಗೊಳ್ಳದೆ ಅದರ ಸಾರವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು, ಧರ್ಮನಿಷ್ಠರಿಂದಾಗಿ ಸಮಾಜಕ್ಕೆ ಯಾವುದೇ ಸಮಸ್ಯೆಯಿಲ್ಲ ಅಧರ್ಮಿಯರೇ ಸವಾಜಕ್ಕೆ ಕಂಠಕರಾಗಿದ್ದಾರೆ ಎಂದರು.

ಸಮಾವೇಶದ ಸಾನಿಧ್ಯ ವಹಿಸಿ ಮಾತನಾಡಿದ ಧರ್ಮಸ್ಥಳ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಮನುಷ್ಯನ ಸಂಶಯ ಗುಣವು ಇಂದು ಪರಸ್ಪರರನ್ನು ದೂರ ಮಾಡುತ್ತಿದೆ. ಎಲ್ಲ ವಿಷಯಕ್ಕೂ ಸಂಶಯದಿಂದ ಕಾಣುವ ಮನುಷ್ಯನ ಕೆಟ್ಟಗುಣಗಳನ್ನು ದೂರೀಕರಿಸಬೇಕಾಗಿದೆ. ಮನುಷ್ಯ ಇಂದು ವೋಟು ಮತ್ತು ನೋಟಿಗಾಗಿ ಸಮಾಜದಲ್ಲಿ ಕೆಡಕನ್ನು ಸೃಷ್ಟಿಸುತ್ತಿದ್ದಾನೆ ಎಂದರು.

ಮುಂಡಳ್ಳಿ ಚರ್ಚ್ ಧರ್ಮಗುರು ಫಾದರ್ ನಿಕೋಲಸ್ ಡಿಸೋಜಾ ಸೌಹಾರ್ದ ಸಂದೇಶ ನೀಡಿದರು.

ಸೌಹಾರ್ದ ಸಮಾವೇಶ ಸ್ವಾಗತ ಸಮಿತಿ ಹಾಗೂ ಜನತಾ ವಿದ್ಯಾಲಯ ಶಿರಾಲಿ ಇದರ ಅಧ್ಯಕ್ಷ ಡಿ.ಜೆ.ಕಾಮತ್, ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಆರ್.ನಾಯ್ಕ, ಶ್ರೀ ರಾಮಕ್ಷೇತ್ರದ ಟ್ರಷ್ಟಿ ಜೆ.ಎನ್.ನಾಯ್ಕ (ಬಾಬು ಮಾಸ್ಟರ್) ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ನಾರಾಯಣ ದೈಮನೆ, ಜನಾತ ವಿದ್ಯಾಲಯದ ಪ್ರಾಂಶುಪಾಲ ಅಮೃತ್ ರಾಮರಥ, ರಹ್ಮಾನಿಯಾ ಮಸೀದಿ ತಟ್ಟಿಹಕ್ಕಲ ಇದರ ಅಧ್ಯಕ್ಷ  ಖ್ವಾಜಾ ಶೇಖ್, ಶಿರಾಲಿ ಗ್ರಾಪಂ ಅಧ್ಯಕ್ಷ ವೆಂಕಟೇಶ್ ನಾಯ್ಕ, ಸಮಾಜ ಸೇವಕ ಡಾ.ಆರ್.ವಿ.ಸರಾಫ್, ಜಮಾತೆ ಇಸ್ಲಾಮಿ ಹಿಂದ್ ಉ.ಕ. ಜಿಲ್ಲಾ ಸಂಚಾಲಕ ತಲ್ಹಾ ಸಿದ್ದಿಬಾಪ, ಭಟ್ಕಳ ಶಾಖಾಧ್ಯಕ್ಷ ಮುಜಾಹಿದ್ ಮುಸ್ತಫಾ ಗ್ರಾ.ಪಂ ಶಿರಾಲಿ ಮಾಜಿ ಸದಸ್ಯ ನಜೀಬುರ್ರಹ್ಮಾನ್ ಶಿರಾಲಿ, ಸುಭಾಷ್ ಕೊಪ್ಪಿಕರ್ ಚಿತ್ರಾಪುರ ಮತ್ತಿರರು ವೇದಿಕೆಯಲ್ಲಿ ಉಪಸ್ಥಿತಿರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X