Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಗೇಪಲ್ಲಿ : ಅಪಘಾತ ಜೀವರಕ್ಷಕ ತರಬೇತಿ...

ಬಾಗೇಪಲ್ಲಿ : ಅಪಘಾತ ಜೀವರಕ್ಷಕ ತರಬೇತಿ ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ22 Feb 2018 6:08 PM IST
share
ಬಾಗೇಪಲ್ಲಿ : ಅಪಘಾತ ಜೀವರಕ್ಷಕ ತರಬೇತಿ ಕಾರ್ಯಗಾರ

ಬಾಗೇಪಲ್ಲಿ,ಫೆ.22: ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾಗಿರುವ ವ್ಯಕ್ತಿಯ ಜೀವವನ್ನು ಹಾಗೂ ಗಾಯಾಳುಗಳನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದರ ಬಗ್ಗೆ ಚಾಲಕರಲ್ಲಿ ಅರಿವು ಮೂಡಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ಸಿದ್ದಪ್ಪ ತಿಳಿಸಿದರು.

ಪಟ್ಟಣದ ತಾ.ಪಂ ಆವರಣದಲ್ಲಿ ಕರ್ನಾಟಕ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ತಾಲೂಕು ಆಡಳಿತ, ತಾ.ಪಂ ಮತ್ತು ವಿವಿಧ ವಾಹನ ಚಾಲಕರ ಸಂಘಗಳು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆಯಡಿಯಲ್ಲಿ  ಅಪಘಾತ ಜೀವರಕ್ಷಕ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಶ್ವದ್ಯಾದಂತ ಸಂಭವಿಸುವ ರಸ್ತೆ ಅಪಘಾತ ಪ್ರಕರಣಗಳಲ್ಲಿ ಭಾರತ 6ನೇ ಸ್ಥಾನವನ್ನು ಹೊಂದಿದೆ. ಅಪಘಾತ ಸಂಭವಿಸಿದ ಮೊದಲ 60 ನಿಮಿಷಗಳ ಅವಧಿಯಲ್ಲಿ ಸೂಕ್ತ ಚಿಕಿತ್ಸೆ ದೊರೆತಲ್ಲಿ ಪ್ರತಿ ವರ್ಷ ಸಮಾರು 1 ಲಕ್ಷಕ್ಕೂ ಹೆಚ್ಚು ಜೀವಗಳನ್ನು ರಕ್ಷಿಸಬಹುದು ಎಂದರು.

ಅಪಘಾತಕೊಳಗಾದವರನ್ನು ರಕ್ಷಿಸುವ ಹಂಬಲವಿದ್ದರೂ ಪ್ರಥಮ ಚಿಕಿತ್ಸೆ ಬಗ್ಗೆ ಅರಿವಿಲ್ಲದಿರುವುದು ಹಾಗೂ ಪೊಲೀಸ್ ಠಾಣೆ ಮತ್ತು ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ಅಲೆದಾಡಬೇಕಾಗಿರುವ ಭಯದಿಂದ ಕಣ್ಣು ಮುಂದೆ ಅಪಘಾತ ಸಂಭವಿಸಿದರೂ ಸಹ ನಮಗೂ ಅದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎನ್ನುವಂತಹ ಘಟನೆಗಳು ಹೆಚ್ಚಾಗಿ ಕಂಡು ಬಂದಿವೆ ಎಂದ ಅವರು ಈ ಹಿನ್ನಲೆಯಲ್ಲಿ ಅಪಘಾತಕ್ಕೆ ಒಳಗಾಗುವಂತಹ ಸಂತ್ರಸ್ಥರಿಗೆ ಕೂಡಲೇ ಪ್ರಥಮ ಚಿಕಿತ್ಸೆ ನೀಡಿ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಗಾಯಾಳುವಿನ ಪ್ರಾಣ ರಕ್ಷಣೆ ಮಾಡುವುದನ್ನು ಉತ್ತೇಜಿಸುವ ದೃಷ್ಠಿಯಿಂದ ರಾಜ್ಯ ಸರ್ಕಾರವೂ  ಅಪಘಾತ ಜೀವ ರಕ್ಷಕ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.

ಈ ಸಂದರ್ಭದಲ್ಲಿ  ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿರುವ ಡಾ.ರಾಜೇಂದ್ರರವರು ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ಹೇಗೆ ಪ್ರಥಮ ಚಿಕಿತ್ಸೆ ನೀಡಬೇಕು, ವ್ಯಕ್ತಿಯನ್ನು ಯಾವ ರೀತಿಯಲ್ಲಿ ರಕ್ಷಣೆ ಮಾಡಬೇಕು ಮುಂತಾದವುಗಳ ಬಗ್ಗೆ ಸವಿವರವಾಗಿ ಚಾಲಕರಿಗೆ ತರಬೇತಿಯಲ್ಲಿ ತಿಳಿಸಿದರು.
 ಈ ಸಂದರ್ಭದಲ್ಲಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧಿಕಾರಿ ಸಿ.ರವಿ, ತಾಲೂಕು ಕಾರ್ಮಿಕ ಇಲಾಖೆಯ  ಅಧಿಕಾರಿ ಸುರೇಂದ್ರ, ಟೆಂಪೋ ಲಾರಿ ಮಾಲಕರ ಸಂಘದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಕಾರು ಚಾಲಕರ ಯೂನಿಯನ್ ಸದಸ್ಯ ಬಿಟಿಸಿ ಸೀನಾ, ಟಿ.ಎನ್.ಆಂಜನಪ್ಪ, ಪ್ರಕಾಶ್, ವಸಂತ್, ಆಟೋಚಾಲಕರ ಸಂಘದ ಅಧ್ಯಕ್ಷ ಭಾಸ್ಕರ್, ವೆಂಕಟೇಶ್, ಜಿ.ಸಿ ರವಿ. ಕೆ.ಎಂ.ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X