Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ನೊಂದು ವಾರದಲ್ಲಿ ಗೌರಿ ಲಂಕೇಶ್ ಹಂತಕರ...

ಇನ್ನೊಂದು ವಾರದಲ್ಲಿ ಗೌರಿ ಲಂಕೇಶ್ ಹಂತಕರ ಮಾಹಿತಿ ಬಹಿರಂಗ: ಗೃಹಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ22 Feb 2018 6:42 PM IST
share
ಇನ್ನೊಂದು ವಾರದಲ್ಲಿ ಗೌರಿ ಲಂಕೇಶ್ ಹಂತಕರ ಮಾಹಿತಿ ಬಹಿರಂಗ:  ಗೃಹಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ. 22: ಹಿರಿಯ ಸಾಹಿತಿ ಕಲಬುರಗಿಯವರ ಹತ್ಯೆಗೆ ಸಂಬಂಧಿಸಿದಂತೆ ನಿಖರ ಮಾಹಿತಿ ದೊರೆತಿಲ್ಲ. ಆದರೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಸ್ಪಷ್ಟ ಮಾಹಿತಿ ದೊರೆತಿದ್ದು, ಸದ್ಯದಲ್ಲಿಯೇ ಬಹಿರಂಗಪಡಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಗುರುವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಎಸ್.ವಿ.ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಸ್ಪಷ್ಟ ಮಾಹಿತಿ ಲಭ್ಯವಾಗಿದೆ. ಕಲಬುರಗಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿಯನ್ನು ಕಲೆ ಹಾಕುವ ಕಾರ್ಯ ನಡೆದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಶ್ನೆ ಮಾಡಿದ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಗೌರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಆದಷ್ಟು ಬೇಗ ಹಂತಕರ ಸುಳಿವನ್ನು ಬಹಿರಂಗಗೊಳಿಸುವುದಾಗಿ ಹೇಳುತ್ತಲೇ ಬಂದಿದ್ದೀರಿ. ಈಗಲೂ ಅದನ್ನೇ ಹೇಳುತ್ತಿದ್ದೀರಿ. ಯಾವಾಗ ಬಹಿರಂಗಪಡಿಸುತ್ತೀರಿ ಎಂಬುದನ್ನು ಸ್ಪಷ್ಟಪಡಿಸಿ ಎಂದು ಕೇಳಿದರು.

ಅದಕ್ಕೆ ಗೃಹ ಸಚಿವರು, ಸ್ಪಷ್ಟ ಮಾಹಿತಿ ಲಭ್ಯವಾಗಿದೆ. ಇನ್ನೊಂದು ವಾರದಲ್ಲಿ ಹಂತಕರ ಕುರಿತ ಮಾಹಿತಿಯನ್ನು ತಿಳಿಸಲಾಗುವುದು ಎಂದರು.

ಈ ವೇಳೆ ಬಿಜೆಪಿ ಸದಸ್ಯ ಪ್ರದೀಪ್ ಶೆಟ್ಟರ್ ಮಾತನಾಡಿ, ಹುಬ್ಬಳ್ಳಿಯಲ್ಲಿ ರೌಡಿಗಳ ಹಾವಳಿ ಮಿತಿಮೀರಿದೆ. ಬೆಂಗಳೂರನ್ನು ಮೀರಿಸುವಂತಹ ಪ್ರಕರಣಗಳು ನಡೆಯುತ್ತಿವೆ. ಅಂತಹ ದುಷ್ಕರ್ಮಿಗಳಿಗೆ ಕಂಡಲ್ಲಿ ಗುಂಡು ಹಾಕುವಂತೆ ಪೊಲೀಸರಿಗೆ ಆದೇಶ ನೀಡಬೇಕೆಂದು ಗೃಹ ಸಚಿವರಲ್ಲಿ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಸಬ್‌ಇನ್ಸ್‌ಪೆಕ್ಟರ್ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಪಿಸ್ತೂಲನ್ನು ನೀಡಿರುತ್ತೇವೆ. ಅದನ್ನು ಅವರು ಬಳಸಬಹುದು ಎಂದು ಹೇಳಿದರು.

ಇದೇ ವೇಳೆ ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 2017ನೆ ಸಾಲಿನಲ್ಲಿ ರಾಜ್ಯದಲ್ಲಿ 63 ಕೊಲೆಗಳು ಹಾಗೂ 185 ಅತ್ಯಾಚಾರ ಪ್ರಕರಣಗಳು ಹಾಗೂ 1,882 ದೌರ್ಜನ್ಯ ಪ್ರಕರಣಗಳು ನಡೆದಿವೆ. ಅದರಲ್ಲಿ 14 ಅತ್ಯಾಚಾರ ಪ್ರಕರಣಗಳು ಮಾತ್ರ ಪತ್ತೆಯಾಗಿವೆ ಎಂದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿ ಪೊಲೀಸ್ ಠಾಣೆಯಲ್ಲಿ ತಿಂಗಳ ಎರಡನೆ ರವಿವಾರ ದಲಿತರ ದಿನವನ್ನಾಗಿ ಆಚರಿಸಿ, ಸ್ಥಳೀಯ ದಲಿತ ಮುಖಂಡರನ್ನು ಸಭೆಗೆ ಆಹ್ವಾನಿಸಿ ದಲಿತರ ಕುಂದು ಕೊರತೆಗಳನ್ನು ಆಲಿಸಿ ವಿಚಾರಣೆ ಕೈಗೊಂಡು ಸಮಸ್ಯೆಯನ್ನು ಬಗೆಹರಿಸಲಾಗುತ್ತಿದೆ. ಇದು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X