ಮಾನಹಾನಿಕಾರಕ ಹೇಳಿಕೆ ನೀಡಿಲ್ಲ: ಪ್ರತಿಭಾ ಕುಳಾಯಿ
ಕಾರ್ಕಳದಲ್ಲಿ ನೀಡಿದ ಹೇಳಿಕೆಗೆ ಸ್ಪಷ್ಟನೆ

ಮಂಗಳೂರು, ಫೆ. 22: ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ಯಾವುದೇ ಮಾನಹಾನಿಕಾರಕ ಹೇಳಿಕೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಹಾಗು ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಪಕ್ಷದ ದ.ಕ.ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಜನವರಿ 12ರ ವಿಜಯವಾಣಿ ಪತ್ರಿಕೆಯಲ್ಲಿ ಶರತ್ ಮಡಿವಾಳರ ತಂದೆ ನೀಡಿದ ಹೇಳಿಕೆಯ ಆಧಾರದ ಮೇಲೆ ನಾನು ಇತ್ತೀಚೆಗೆ ಕಾರ್ಕಳದಲ್ಲಿ ಭಾಷಣ ಮಾಡಿದ್ದೆ. ಅಲ್ಲಿ ನಾನೇನು ತಪ್ಪು ಸಂದೇಶ ರವಾನಿಸಿಲ್ಲ. ಮಾನಹಾನಿಕಾರಕ ಹೇಳಿಕೆಯನ್ನೂ ನೀಡಿಲ್ಲ. ಬಿಲ್ಲವ ಸಮಾಜದ ಯುವಕರು ಹಿಂದುತ್ವಕ್ಕೆ ಹೇಗೆ ಬಲಿಯಾಗುತ್ತಿದ್ದಾರೆ ಎಂಬುದನ್ನು ನಾನು ಬಿಡಿಸಿ ಹೇಳಿದ್ದೆ. ಆದರೂ ಶರತ್ ಮಡಿವಾಳರ ತಂದೆ ನನ್ನ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಿಕೆ ನೀಡಿರುವುದು ಅಚ್ಚರಿ ಹುಟ್ಟಿಸಿದೆ ಎಂದರು.
Next Story





