ಉಡುಪಿ: ಶ್ರೀಕೃಷ್ಣ ಮಠದಲ್ಲಿ ‘ಶ್ರೀನಿವಾಸ ಕಲ್ಯಾಣ’

ಉಡುಪಿ, ಫೆ.22: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠ ಹಾಗೂ ಶ್ರೀ ರಾಘವೇಂದ್ರ ಸಪ್ತಾಹ ಕಾರ್ಯಾಚರಣಾ ಸಮಿತಿ ಮಂತ್ರಾಲಯಇವುಗಳ ವತಿಯಿಂದ ನಡೆಯುತ್ತಿರುವ ಶ್ರೀ ರಾಘವೇಂದ್ರ ಸಪ್ತಾಹ ರಜತೋತ್ಸವ ಕಾರ್ಯಕ್ರಮದಲ್ಲಿ ಬುಧವಾರ ರಾತ್ರಿ ರಾಜಾಂಗಣದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ವೈಭವದಿಂದ ನಡೆಯಿತು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥರು ಅಕ್ಷತಾರೋಪಣಾ ಮಾಡಿ ಮಂಗಳಾರತಿ ಬೆಳಗಿ, ಪಾಶ್ಚಾತ್ಯ ಸಂಸ್ಕೃತಿಯಂತೆ ವಿವಾಹವಾಗಿ ಪತಿ ಪತ್ನಿಯರು ವಿಚ್ಚೇದನ ಮಾಡಿಕೊಳ್ಳುವುದನ್ನು ಬಿಟ್ಟು, ಪದ್ಮಾವತಿ ಶ್ರೀನಿವಾಸರಂತೆ ನಿತ್ಯಕಲ್ಯಾಣವಾಗಿ ದಾಂಪತ್ಯ ಜೀವನವನ್ನು ನಡೆಸಿ ಹಿಂದೂ ಸಂಸ್ಕೃತಿ ಹಾಗೂ ಭಾರತೀಯ ಸಂಸ್ಕೃತಿಯನ್ನು ಬೆಳೆಸಬೇಕು ಎಂದು ಕರೆ ನೀಡಿದರು.
Next Story





