ಗುತ್ತಿಗೆ ಸಿಬ್ಬಂದಿಗಳನ್ನು ಖಾಯಂಗೊಳಿಸಲು ಸಾಧ್ಯವಿಲ್ಲ: ಡಾ.ಶರಣಪ್ರಕಾಶ್ ಪಾಟೀಲ್
ಬೆಂಗಳೂರು, ಫೆ.22: ಸುಪ್ರೀಂಕೋರ್ಟ್ ಉಮಾದೇವಿ ಪ್ರಕರಣದಲ್ಲಿ 2006ರ ಎ.1ರಂದು ನೀಡಿರುವ ತೀರ್ಪಿನನ್ವಯ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಯಂಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಾ.ರಫೀಕ್ ಅಹ್ಮದ್, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 2009ರಿಂದ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ನೌಕರರನ್ನು ಖಾಯಂಗೊಳಿಸುವ ಸಂಬಂಧ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ನೌಕರರ ಸೇವೆಯನ್ನು ಖಾಯಂಗೊಳಿಸುವ ಯಾವುದೇ ಪ್ರಸ್ತಾವನೆಯು ಸರಕಾರದ ಪರಿಶೀಲನೆಯಲ್ಲಿ ಇಲ್ಲ ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು.
Next Story





