ನಿವೃತ್ತ ಪೊಲೀಸ್ ಅಧೀಕ್ಷಕ ಎಂ. ಗಣೇಶ್ ನಿಧನ

ಮಂಗಳೂರು ಫೆ. 23: ನಿವೃತ್ತ ಪೊಲೀಸ್ ಅಧೀಕ್ಷಕ ಎಂ. ಗಣೇಶ್ (67) ನಗರದ ಕದ್ರಿ ಕಂಬ್ಳ ಕಾಸ್ಮೋಸ್ ರಸ್ತೆಯ ಸ್ವಗೃಹದಲ್ಲಿ ಹೃದಯಾಘಾತದಿಂದ ಶುಕ್ರವಾರ ನಿಧನರಾದರು.
ರಾಜ್ಯ ಪೊಲೀಸ್ ಇಲಾಖೆಯ 35 ವರ್ಷದ ಸೇವಾವಧಿಯಲ್ಲಿ ಸೋಮವಾರಪೇಟೆ, ಬೆಂಗಳೂರು, ಮೈಸೂರು, ಮಂಗಳೂರು ನಗರಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಕ್ಷೇತ್ರದಲ್ಲಿ ಜನಪ್ರಿಯರಾಗಿ ಜನಮನ್ನಣೆಗಳಿಸಿದ್ದರು. ರಾಜ್ಯ ಮುಖ್ಯಮಂತ್ರಿಯವರ ವಿಶೇಷ ಪೊಲೀಸ್ ಪ್ರಶಸ್ತಿಗೆ ಪಾತ್ರರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿ ಮತ್ತು ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ನಿವೃತ್ತಿಯ ಬಳಿಕ ಸಮಾಜ ಸೇವೆಯ ಅಂಗವಾಗಿ ನಗರದ ದೇವಾಡಿಗರ ಸಂಘದ ಉಪಾಧ್ಯಕ್ಷ, ವಿವಿ ಸರಕಾರಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹಾಗೂ ಬಿಇಎಂ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರ ಅಂತ್ಯಕ್ರಿಯೆ ಫೆ. 24ರಂದು ಪೂ.11:30ಕ್ಕೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Next Story





