Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಗೇಪಲ್ಲಿ: ನ್ಯಾಷನಲ್ ಕಾಲೇಜ್...

ಬಾಗೇಪಲ್ಲಿ: ನ್ಯಾಷನಲ್ ಕಾಲೇಜ್ ವಾರ್ಷಿಕೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Feb 2018 11:14 PM IST
share
ಬಾಗೇಪಲ್ಲಿ: ನ್ಯಾಷನಲ್ ಕಾಲೇಜ್ ವಾರ್ಷಿಕೋತ್ಸವ ಕಾರ್ಯಕ್ರಮ

ಬಾಗೇಪಲ್ಲಿ,ಫೆ.23: ನ್ಯಾಷನಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಥಿಗಳು ತಮ್ಮ ತಂದೆ ತಾಯಿಗಳ ಪರಿಶ್ರಮವನ್ನು ನೆನಪಿನಲ್ಲಿಟ್ಟುಕೊಂಡು ಓದಿ ಉನ್ನತ ಸ್ಥಾನಮಾನ ಗಳಿಸಿ ಬಲಿಷ್ಠ ಭಾರತದ ನಿರ್ಮಾಣಕ್ಕೆ ಮುನ್ನುಡಿ ಬರೆಯಬೇಕಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ಅವರು ಪಟ್ಟಣದ ನ್ಯಾಷನಲ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ತಜ್ಞ ಡಾ. ಎಚ್. ನರಸಿಂಹಯ್ಯನವರು ಈ ಭಾಗಕ್ಕೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ. ಅದು ನ್ಯಾಷನಲ್ ಕಾಲೇಜು ಸ್ಥಾಪನೆ ಮಾಡಿ, ಈ ಭಾಗದ ಬಡ ತಂದೆತಾಯಿಗಳ ಮಕ್ಕಳಿಗೆ ವಿದ್ಯಾದಾನ ಮಾಡುವ ಮುಖಾಂತರ  ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ಈ ಕ್ಷೇತ್ರದಲ್ಲಿ ಅವರು ಜೀವನಪೂರ್ತಿ ಬಡವರಿಗಾಗಿ ಮುಡುಪಿಟ್ಟವರು, ಸಮಾಜದ ಸುಖಕ್ಕಾಗಿ ತನ್ನ ಸುಖವನ್ನೇ ತ್ಯಾಗ ಮಾಡಿದ ಉದಾರಿಗಳು. ಕಾಲೇಜು ಪ್ರಾರಂಭವಾದ ಹೊಸ ದಿನಗಳಲ್ಲಿ ಬೆಂಗಳೂರಿನಿಂದ ಬಾಗೇಪಲ್ಲಿಗೆ ಲಾರಿಬಸ್‍ಗಳಲ್ಲಿ ಪ್ರಯಾಣ ಮಾಡಿ ಇಲ್ಲಿಗೆ ಬರುತ್ತಿದ್ದರು. ಅವರ ಸರಳ ಸಜ್ಜನಿಕೆ ಎಲ್ಲರಿಗೂ ಆದರ್ಶ ಎಂದರು.

ನ್ಯಾಷನಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಚ್.ಎಸ್. ರಾಮರಾವ್ ಮಾತನಾಡಿ, ಆಂದ್ರದ ಗಡಿಭಗದಲ್ಲಿರುವ ಈ ಭಾಗದಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬಾಲಾಜಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿದ್ದ ಗೊರ್ತಪಲ್ಲಿ ಶಂಕರರೆಡ್ಡಿ ನೇತೃತ್ವದ ಸಮಿತಿಯು ಡಾ. ಎಚ್.ಎನ್.ರವರ ಬಳಿಗೆ ಹೋಗಿ ನ್ಯಾಷನಲ್ ಕಾಲೇಜನ್ನು ಸ್ಥಾಪಿಸಬೇಕೆಂದು ಕೋರಿದಾಗ ಅವರ ಮನವಿಗೆ ಸ್ಪಂದಿಸಿದ ಎಚ್.ಎನ್.ರವರು ಬಾಗೇಪಲ್ಲಿಗೆ ಬಂದು ಸ್ಥಳ ಪರಿಶೀಲನೆ ನಡೆಸಿ ಕಾಲೇಜನ್ನು ಸ್ಥಾಪಿಸಿದರು. ಈಗ ಈ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ನೀವು ಕೂಡಾ ಇದೇ ದಾರಿಯಲ್ಲಿ ಸಾಗಬೇಕಾಗಿದೆ ಎಂದರು  
   
ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್ ಕರ್ನಾಟಕದ ಗೌರವ ಕಾರ್ಯದರ್ಶಿ ಪ್ರೊ. ಎಸ್.ಎನ್.ನಾಗರಾಜರೆಡ್ಡಿ, ಮಾತನಾಡಿ, ಈ ದೇಶದಲ್ಲಿ ಬಹು ಭಾಷೆ, ಬಹು ಸಂಸ್ಕೃತಿಗಳಿದ್ದರೂ, ಜಾತ್ಯಾತೀತ ತತ್ವಗಳು ನಮ್ಮೆಲ್ಲರನ್ನೂ ಒಂದಾಗಿಸಿದೆ. ಹಾಗಾಗಿ ನಮ್ಮ ಸಂವಿಧಾನದ ಆಶಯಗಳನ್ನು ಗೌರವಿಸಿ ಉಳಿಸಿಬೆಳೆಸುವ ನಿಟ್ಟಿನಲ್ಲಿ ತಾವೆಲ್ಲರೂ ಮುನ್ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ನ್ಯಾಷನಲ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ವಿ.ವೆಂಕಟಶಿವಾರೆಡ್ಡಿ,  ಪ್ರಾಂಶುಪಾಲ ಪ್ರೊ.ಬಿ.ಪಿ.ವಿಜಯ್‍ಕುಮಾರ್, ಗೌರ್ನಿಂಗ್ ಕೌನ್ಸಿಲ್ ಸದಸ್ಯ ಕೆ.ನರಸಿಂಹಪ್ಪ, ಪ್ರಾಂಶುಪಾಲರಾದ ಪ್ರೊ.ಪಿ.ವೆಂಕಟರಾಂ, ಉಪ ಪ್ರಾಂಶುಪಾಲರಾದ ಪ್ರೊ.ಎಚ್.ವಿ. ಶಿವಕುಮಾರ್ ಡಾ. ರಾಮಯ್ಯ ಡಾ.ಸೋಮಶೇಖರ್, ಕೆ.ಎನ್.ಪ್ರಸಾದ್, ಜಿ.ಪಂ. ಸದಸ್ಯ ನರಸಿಂಹಪ್ಪ ಗ್ರಂಥಾಪಾಲಕ ಜಯರಾಮರೆಡ್ಡಿ ರಾಜ್ಯ ಯುವ ಪ್ರಶಸ್ತಿ ವಿಜೇತ ವಿ.ರವಿ.ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X