Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿಕ್ಕಟ್ಟು ಉಲ್ಬಣಿಸುವ ಕ್ರಮ ಬೇಡ:...

ಬಿಕ್ಕಟ್ಟು ಉಲ್ಬಣಿಸುವ ಕ್ರಮ ಬೇಡ: ಭಾರತಕ್ಕೆ ಮಾಲ್ದೀವ್ಸ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ23 Feb 2018 11:34 PM IST
share
ಬಿಕ್ಕಟ್ಟು ಉಲ್ಬಣಿಸುವ ಕ್ರಮ ಬೇಡ: ಭಾರತಕ್ಕೆ ಮಾಲ್ದೀವ್ಸ್ ಎಚ್ಚರಿಕೆ

ಮಾಲೆ, ಫೆ. 23: ರಾಜಕೀಯ ಬಿಕ್ಕಟ್ಟು ವಿಕೋಪಕ್ಕೆ ಹೋಗಬಹುದಾದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದೆಂದು ಮಾಲ್ದೀವ್ಸ್ ಭಾರತಕ್ಕೆ ಎಚ್ಚರಿಕೆ ನೀಡಿದೆ.

ಹಿಂದೂ ಮಹಾಸಾಗರದ ದ್ವೀಪ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಮತ್ತೆ 30 ದಿನಗಳವರೆಗೆ ವಿಸ್ತರಣೆಗೊಂಡಿರುವ ಬಗ್ಗೆ ಭಾರತ ವ್ಯಕ್ತಪಡಿಸಿರುವ ಕಳವಳಕ್ಕೆ ಮಾಲ್ದೀವ್ಸ್ ಈ ಪ್ರತಿಕ್ರಿಯೆ ನೀಡಿದೆ.

‘‘ಭಾರತ ಸರಕಾರ ನೀಡಿರುವ ಸಾರ್ವಜನಿಕ ಹೇಳಿಕೆಗಳನ್ನು ಅಧ್ಯಕ್ಷ ಅಬ್ದುಲ್ಲಾ ಯಮೀನ್ ಸರಕಾರ ಗಮನಿಸಿದೆ. ಈ ಹೇಳಿಕೆಯು ದೇಶದಲ್ಲಿ ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದ ವಾಸ್ತವಾಂಶಗಳನ್ನು ಕಡೆಗಣಿಸಿದೆ’’ ಎಂದು ಗುರುವಾರ ರಾತ್ರಿ ಹೊರಡಿಸಿದ ಹೇಳಿಕೆಯೊಂದರಲ್ಲಿ ಮಾಲ್ದೀವ್ಸ್ ವಿದೇಶ ಸಚಿವಾಲಯ ಹೇಳಿದೆ.

 ತುರ್ತು ಪರಿಸ್ಥಿತಿಯನ್ನು 30 ದಿನಗಳವರೆಗೆ ವಿಸ್ತರಿಸುವುದು ಅಸಾಂವಿಧಾನಿಕ ಎಂಬ ಭಾರತದ ಹೇಳಿಕೆಯು ‘ವಾಸ್ತವಾಂಶಗಳ ಸ್ಪಷ್ಟ ಕಡೆಗಣನೆಯಾಗಿದೆ ಹಾಗೂ ಮಾಲ್ದೀವ್ಸ್‌ನ ಸಂವಿಧಾನ ಮತ್ತು ಕಾನೂನುಗಳ ಉಲ್ಲಂಘನೆಯಾಗಿದೆ’ ಎಂದು ವಿದೇಶ ಸಚಿವಾಲಯ ಹೇಳಿದೆ.

ಪ್ರತಿಪಕ್ಷಗಳ ನಾಯಕರನ್ನು ತಕ್ಷಣ ಜೈಲಿನಿಂದ ಬಿಡುಗಡೆಗೊಳಿಸಬೇಕು ಹಾಗೂ ಆಡಳಿತಾರೂಢ ಪಕ್ಷದಿಂದ ಪ್ರತಿಪಕ್ಷಗಳಿಗೆ ಪಕ್ಷಾಂತರಗೊಂಡಿರುವ 12 ಸಂಸದರ ಸದಸ್ಯತ್ವವನ್ನು ಮರಳಿಸಬೇಕು ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಈ ತಿಂಗಳ ಆರಂಭದಲ್ಲಿ ನೀಡುವುದರೊಂದಿಗೆ 4,27,756 ಜನಸಂಖ್ಯೆಯ ಮಾಲ್ದೀವ್ಸ್‌ನಲ್ಲಿ ಬಿಕ್ಕಟ್ಟು ಆರಂಭಗೊಂಡಿತ್ತು.

ಅಮಾನತುಗೊಂಡಿರುವ ಸಂಸದರ ಸದಸ್ಯತ್ವ ಮರಳಿಸಿದರೆ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಸರಕಾರ ಬಹುಮತವನ್ನು ಕಳೆದುಕೊಳ್ಳುತ್ತದೆ.

ಸುಪ್ರೀಂ ಕೋರ್ಟ್ ತೀರ್ಪು ಜಾರಿಗೊಳಿಸಲು ನಿರಾಕರಿಸಿದ ಯಮೀನ್ ಫೆಬ್ರವರಿ 5ರಂದು ದೇಶದಲ್ಲಿ 15 ದಿನಗಳ ತುರ್ತು ಪರಿಸ್ಥಿತಿ ಹೇರಿದರು ಹಾಗೂ ತೀರ್ಪು ನೀಡಿದ ನ್ಯಾಯಾಧೀಶರನ್ನು ಬಂಧಿಸಿದರು.

ಬಳಿಕ ಬುಧವಾರ ತುರ್ತು ಪರಿಸ್ಥಿತಿಯನ್ನು ಮತ್ತೆ 30 ದಿನಗಳಿಗೆ ವಿಸ್ತರಿಸಲಾಗಿದೆ.

ಅತ್ಯಂತ ಕಷ್ಟಕರ ಪರಿಸ್ಥಿತಿ

‘‘ಮಾಲ್ದೀವ್ಸ್ ತನ್ನ ಇತಿಹಾಸದಲ್ಲೇ ಅತ್ಯಂತ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಹಾಗಾಗಿ, ಭಾರತ ಸೇರಿದಂತೆ ಅಂತಾರಾಷ್ಟ್ರೀಯ ಸಮುದಾಯದಲ್ಲಿರುವ ಸ್ನೇಹಿತರು ಮತ್ತು ಭಾಗೀದಾರರು ದೇಶದ ಪರಿಸ್ಥಿತಿಯನ್ನು ಹದಗೆಡಿಸುವ ಕೃತ್ಯಗಳನ್ನು ಮಾಡುವುದರಿಂದ ದೂರವಿರಬೇಕು’’ ಎಂದು ಮಾಲ್ದೀವ್ಸ್ ವಿದೇಶ ಸಚಿವಾಲಯ ಹೊರಡಿಸಿದ ಹೇಳಿಕೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X