Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತ ಸಮಾವೇಶ ನಡೆಸುವ ನೈತಿಕತೆ...

ರೈತ ಸಮಾವೇಶ ನಡೆಸುವ ನೈತಿಕತೆ ಬಿಜೆಪಿಗಿಲ್ಲ: ಡಿ. ಬಸವರಾಜ್

ವಾರ್ತಾಭಾರತಿವಾರ್ತಾಭಾರತಿ24 Feb 2018 5:30 PM IST
share
ರೈತ ಸಮಾವೇಶ ನಡೆಸುವ ನೈತಿಕತೆ ಬಿಜೆಪಿಗಿಲ್ಲ: ಡಿ. ಬಸವರಾಜ್

ದಾವಣಗೆರೆ,ಫೆ.24: ರಾಷ್ಟ್ರೀಯ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿರುವ ಬಿಜೆಪಿಗೆ ರೈತ ಸಮಾವೇಶ ನಡೆಸುವ ನೈತಿಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್ ಟೀಕಿಸಿದರು. 

ಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಸತತ ಬರಗಾಲದಿಂದ ರಾಜ್ಯದಲ್ಲಿ ಸಾಲು ಸಾಲಾಗಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇವರ ಸಂಕಷ್ಟ ಪರಿಹರಿಸಲು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದರೂ ಇದುವರೆಗೆ ಸ್ಪಂದಿಸಿಲ್ಲ. ಅದರೆ, ಈಗ ರೈತರ ಹೆಸರಲ್ಲಿ ಸಮಾವೇಶಕ್ಕೆ ಆಗಮಿಸುತ್ತಿರುವುದು ನಾಚೀಕೆಗೇಡಿನ ಸಂಗತಿ ಎಂದರು.   

ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ವಿವಿಧ ಸಹಕಾರ ಸಂಘಗಳ ಸಾಲ ಮನ್ನಾ ಮಾಡಿದ್ದಾರೆ. ಅಲ್ಲದೇ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲವನ್ನು ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರೂ ಸ್ಪಂದಿಸದ ಪ್ರಧಾನಿ ನರೇಂದ್ರ ಮೋದಿ ಅವರು ಓಟಿಗಾಗಿ ರೈತ ಸಮಾವೇಶ ಮಾಡುತ್ತಿರುವುದು ಖಂಡನೀಯ ಎಂದರು. 

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಒತ್ತಾಯಿಸಿದ ರೈತರ ಮೇಲೆ ಗುಂಡು ಹಾರಿಸಿ ಇಬ್ಬರು ರೈತರ ಬಲಿ ಪಡೆದ ಘಟನೆ ಪಕ್ಕದ ಹಾವೇರಿಯಲ್ಲಿ ಇಂದಿಗೂ ಹಸಿರಾಗಿದೆ. ರೈತ ಪರವಾದ ಕೆಲಸ ಮಾಡದ ಯಡಿಯೂರಪ್ಪ ಅವರಿಗೆ ಜನ್ಮದಿನ ಸಂದರ್ಭದಲ್ಲಿ ರೈತ ಬಂಧು ಎನ್ನುವ ಬಿರುದು ನೀಡುವಮೂಲಕ ನೇಗಿಲು ಉಡುಗೊರೆಯಾಗಿ ನೀಡುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ಟೀಕಿಸಿದರು.  

ಕಳೆದ 3 ವರ್ಷದಿಂದ ಮಹದಾಯಿ ನೀರಿಗಾಗಿ ರೈತರು ಹೋರಾಟ ನಡೆಸುತ್ತಿದ್ದಾರೆ. ಅದರೆ, ಈ ವಿಷಯದಲ್ಲಿ ಮೋದಿ ಅವರು ಮೌನಿಯಾಗಿರುವುದು ರೈತರಿಗೆ ಬಗೆದ ದ್ರೋಹವಾಗಿದೆ. ಕಾಲ ಕಾಲಕ್ಕೆ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡದೆ 24 ಗಂಟೆಗಳ ಕಾಲ ಉದ್ಯಮಿಗಳ ಹಿತ ಕಾಪಾಡುತ್ತಿದ್ದಾರೆ. ಮೋದಿ ಆಡಳಿತದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಸರ್ವನಾಶವಾಗಿದೆ ಎಂದು ಹೇಳಿದರು. 

ರಫೆಲ್ ಯುದ್ದ ವಿಮಾನ ಖರೀದಿಯಲ್ಲಿ ಭಾರಿ ಭ್ರಷ್ಟಚಾರವನ್ನ ಮೋದಿ ಸರಕಾರ ನಡೆಸಿದ್ದು ಇದರಲ್ಲಿ ಖುದ್ದು ಪ್ರಧಾನಮಂತ್ರಿ ಆಸಕ್ತಿ ವಹಿಸಿ ಒಂದಕ್ಕೆ ಎರಡರಷ್ಟು ಬೆಲೆ ನೀಡಿ ತಮ್ಮ ಆಪ್ತ ಉದ್ಯಮಿ ಅಂಬಾನಿ ಕುಟುಂಬಕ್ಕೆ ಸಹಾಯ ಮಾಡಲು ಹೊರಟಿರುವುದು ಜಗತ್ತಿಗೆ ಗೊತ್ತಾಗಿದೆ. ಪ್ರಾಮಾಣಿಕತೆಯ ಮುಖವಾಡ ಧರಿಸಿರುವ ಮೋದಿಯವರ ಮುಖವಾಡವನ್ನು ಜನರು ಕಳಚಲಿದ್ದಾರೆ ಎಂದರು.   

ಗೋಷ್ಠಿಯಲ್ಲಿ ಅಲ್ಲಾವುಲ್ಲಿ ಘಾಜಿಖಾನ್, ಅಶ್ರಫ್ ಆಲಿ,ಲಿಯಾಖತ್,ರಹಮತ್, ಡಿ. ಶಿವಕುಮಾರ್, ಈಶ್ವರ್ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X