Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಿಂಬಾಗೆ ಸೈಫ್ ಪುತ್ರಿ ನಾಯಕಿ

ಸಿಂಬಾಗೆ ಸೈಫ್ ಪುತ್ರಿ ನಾಯಕಿ

ವಾರ್ತಾಭಾರತಿವಾರ್ತಾಭಾರತಿ24 Feb 2018 5:48 PM IST
share
ಸಿಂಬಾಗೆ ಸೈಫ್ ಪುತ್ರಿ ನಾಯಕಿ

ಸೈಫ್ ಅಲಿ ಖಾನ್ ಹಾಗೂ ಅವರ ಪರಿತ್ಯಕ್ತ ಪತ್ನಿ ಅಮೃತಾಸಿಂಗ್ ಅವರ ಪುತ್ರಿ ಸಾರಾ ಅಲಿ ಖಾನ್, ‘ಕೇದಾರ್‌ನಾಥ್’ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಬೇಕಾಗಿತ್ತು. ಅಭಿಷೇಕ್ ಕಪೂರ್ ನಿರ್ದೇಶನದ ಈ ಚಿತ್ರಕ್ಕೆ ಸುಶಾಂತ್‌ಸಿಂಗ್ ರಜಪೂತ್ ನಾಯಕನಾಗಿದ್ದರು. ಆದರೆ ಚಿತ್ರದ ನಿರ್ಮಾಪಕರಾದ ಕ್ರಿಆರ್ಜ್ ಎಂಟರ್‌ಟೈನ್‌ಮೆಂಟ್‌ನ ನಿರ್ಮಾಪಕ ಪ್ರೇರಣಾ ಆರೋರಾ ಅವರು, ನಿರ್ದೇಶಕರ ವಿರುದ್ಧ ಕಾನೂನುಸಮರ ಸಾರಿರುವುದೇ ಕೇದಾರ್‌ನಾಥ್ ಚಿತ್ರ ಸ್ಥಗಿತಗೊಳ್ಳಲು ಕಾರಣವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಕೇದಾರ್‌ನಾಥ್‌ನ ಶೂಟಿಂಗ್ ಕೇವಲ ನಾಲ್ಕು ತಿಂಗಳಲ್ಲೇ ಪೂರ್ಣಗೊಳ್ಳಬೇಕಿತ್ತು. ಆದರೆ ನಿರ್ದೇಶಕ ಅಭಿಷೇಕ್ ಕಪೂರ್‌ರ ವೃತ್ತಿಪರವಲ್ಲದ ನಡವಳಿಕೆ ಹಾಗೂ ಕೆಟ್ಟ ನಿರ್ವಹಣೆಯು ಚಿತ್ರದ ಶೂಟಿಂಗ್ ಆಮೆಗತಿಯಲ್ಲಿ ಸಾಗುವಂತೆ ಮಾಡಿದೆ ಹಾಗೂ ಹಲವಾರು ಬಾರಿ ಸ್ಥಗಿತಗೊಳಿಸಿದೆಯೆಂದು ನಿರ್ಮಾಪಕಿ ಪ್ರೇರಣಾರ ಆರೋಪವಾಗಿದೆ. ಹೀಗೆ ತನ್ನ ಚೊಚ್ಚಲ ಚಿತ್ರ ವಿವಾದದಲ್ಲಿ ಮುಳುಗಿರುವುದರಿಂದ, ಸಾರಾ ಈಗ ರಣವೀರ್‌ಸಿಂಗ್ ಅಭಿನಯದ ‘ಸಿಂಬಾ’ದ ಮೂಲಕ ಬಾಲಿವುಡ್ ರಂಗಪ್ರವೇಶಕ್ಕೆ ಸಿದ್ಧರಾಗುತ್ತಿದ್ದಾರೆ. ‘ಸಿಂಗಂ’, ‘ಚೆನ್ನೈ ಎಕ್ಸ್‌ಪ್ರೆಸ್’, ‘ಗೋಲ್‌ಮಾಲ್ ಎಗೇನ್’ನಂತಹ ಸೂಪರ್‌ಡ್ಯೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿರುವ ರೋಹಿತ್ ಶೆಟ್ಟಿ ನಿರ್ದೇಶಿಸಿರುವ ‘ಸಿಂಬಾ’ ಡಿಸೆಂಬರ್ 28ರಂದು ರಿಲೀಸ್ ಆಗಲಿದೆ. ‘ಸಿಂಗಂ’ ಸಿನೆಮಾ ಮಾದರಿಯ ಸೂಪರ್‌ಕಾಪ್ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ರಣವೀರ್‌ಸಿಂಗ್, ಸಂಗ್ರಾಮ್ ಭಲೆರಾವ್ ಯಾನೆ ಸಿಂಬಾ ಎಂಬ ದಿಟ್ಟ ಪೊಲೀಸ್ ಅಧಿಕಾರಿಯಾಗಿ ನಟಿಸುತ್ತಿದ್ದಾರೆ.

ಈ ನಡುವೆ ಕಳೆದ ವರ್ಷದ ಸೂಪರ್‌ಹಿಟ್ ಚಿತ್ರ ಹಿಂದಿ ಮೀಡಿಯಂನ ಮುಂದುವರಿದ ಭಾಗದಲ್ಲಿ ಸಾರಾ ನಟಿಸಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಆ ಚಿತ್ರದಲ್ಲಿ ಸಾರಾ ಅವರು ಇರ್ಫಾನ್ ಖಾನ್‌ರ ಹದಿಹರೆಯದ ಪುತ್ರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಒಟ್ಟಿನಲ್ಲಿ ತನ್ನ ಮೊದಲ ಚಿತ್ರದ ನಿರ್ಮಾಣ ಮುಗ್ಗರಿಸಿದರೂ, ಬೇಡಿಕೆಗಳು ಅರಸಿಬರುತ್ತಿರುವುದು ಸಾರಾಗೆ ಸಂತಸ ತಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X