ಹಿರಿಯ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ: 7ನೆ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ವಾರಾಣಾಸಿ, ಫೆ. 25: ಹಿರಿಯ ವಿದ್ಯಾರ್ಥಿಯ ಲೈಂಗಿಕ ಕಿರುಕುಳದಿಂದ ಬೇಸತ್ತ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪುರಾ ಗ್ರಾಮದಲ್ಲಿ ನಡೆದಿದೆ.
ಶನಿವಾರ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಈ ಬಾಲಕಿ ಹಿರಿಯ ವಿದ್ಯಾರ್ಥಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಳು. ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಹಿರಿಯ ವಿದ್ಯಾರ್ಥಿ 11ನೆ ತರಗತಿಯಲ್ಲಿ ಓದುತ್ತಿದ್ದು, ಮಿರ್ಜಾಪುರದವನು ಎಂದು ಪೊಲೀಸರು ಹೇಳಿದ್ದಾರೆ.
ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಯ ಪತ್ತೆಗೆ ಜಾಲ ಬೀಸಲಾಗಿದೆ ಎಂದು ವಿವರಿಸಿದ್ದಾರೆ. ಹುಡುಗನ ನಡವಳಿಕೆ ಬಗ್ಗೆ ಶಾಲಾ ಅಧಿಕಾರಿಗಳಿಗೆ ಈ ಮೊದಲೇ ದೂರು ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಾಲಕಿಯ ತಂದೆ ದೂರಿದ್ದಾರೆ.
Next Story