ಪೊಲೀಸ್ ವಾಹನದಿಂದ ಜಿಗಿದು ಸಾವನ್ನಪ್ಪಿದ ಅಕ್ರಮ ಮದ್ಯ ಸಾಗಾಟ ಪ್ರಕರಣದ ಆರೋಪಿ

ಜೇವರ್,ಫೆ.26 : ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ಜೇವರ್ ಎಂಬಲ್ಲಿ ಪೊಲೀಸ್ ವಾಹನವೊಂದರಿಂದ ಹೊರಕ್ಕೆ ಜಿಗಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಮದ್ಯ ಕಳ್ಳಸಾಗಣಿಕೆ ಆರೋಪದಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದರು.
"ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಂತೆಯೇ ಆತ ತಪ್ಪಿಸಿಕೊಳ್ಳುವ ಭರದಲ್ಲಿ ಪೊಲೀಸ್ ವ್ಯಾನಿನಿಂದ ಜಿಗಿದು ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ,'' ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜೇವರ್ ಶಾಸಕ ಧೀರೇಂದ್ರ ಠಾಕುರ್ ತಿಳಿಸಿದ್ದಾರೆ. ಘಟನೆಯನ್ನು ಮುಖ್ಯಮಂತ್ರಿ ಆದಿತ್ಯನಾಥ್ ಅವರ ಗಮನಕ್ಕೆ ತರಲಾಗುವುದು. ಮೃತನ ಕುಟುಂಬಕ್ಕೂ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.ಘಟನೆಯ ಬಗ್ಗೆ ತನಿಖೆ ಮುಂದುವರಿಯುತ್ತಿದೆ.
Next Story





