ಬಜರಂಗದಳ ಕಾರ್ಯಕರ್ತರಿಂದ ಇಬ್ಬರು ದಲಿತ ಯುವಕರ ಮೇಲೆ ಹಲ್ಲೆ: ದೂರು

ಚಿಕ್ಕಮಗಳೂರು, ಫೆ. 26: ದಲಿತ ಯುವಕರಿಬ್ಬರ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೈದಿರುವ ಬಗ್ಗೆ ಆಲ್ದೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೂದುವಳ್ಳಿ ದಿನೇಶ್, ಹೆಡದಾಳು ಗಿರೀಶ್ ಎಂಬವರು ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.
ಬಜರಂಗದಳದ ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ತುಡುಕುರು ಮಂಜು ಮತ್ತು ಕಾರ್ಯಕರ್ತರ ತಂಡ ಈ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಆಲ್ದೂರು ನಗರದಲ್ಲಿ ರವಿವಾರ ಈ ಘಟನೆ ನಡೆದಿದೆ. ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ತುಡುಕುರು ಮಂಜು ಮತ್ತು ತಂಡವು ಜಾತಿ ನಿಂದನೆ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.
ಗಾಯಾಳುಗಳಾದ ದಿನೇಶ್ ಮತ್ತು ಗಿರೀಶ್ ಚಿಕ್ಕಮಗಳೂರು ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





