ಬೆಂಗಳೂರು: ಬೀಗ ಒಡೆದು ಕಳವು
ಬೆಂಗಳೂರು, ಫೆ.26: ಮನೆಯೊಂದರ ಬೀಗ ಒಡೆದು ಒಳನುಗ್ಗಿರುವ ದುಷ್ಕರ್ಮಿಗಳು 2.35 ಲಕ್ಷ ರೂ. ನಗದು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಇಲ್ಲಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಾಗರಬಾವಿಯ 3ನೆ ಕ್ರಾಸ್ ನಿವಾಸಿ ಪಾಪಯ್ಯ ಎಂಬುವರು ರವಿವಾರ ಮಧ್ಯಾಹ್ನ 1:45ರ ಸುಮಾರಿಗೆ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಈ ವೇಳೆ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಬೀರುವನ್ನು ಮೀಟಿ 2.35 ಲಕ್ಷ ರೂ. ಹಣ ಹಾಗೂ 214 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಘಟನೆ ಸಂಬಂಧ ಶ್ವಾನದಳ, ಬೆರಳಚ್ಚು ತಜ್ಞರೊಂದಿಗೆ ಸ್ಥಳಕ್ಕೆ ತೆರಳಿದ ಅನ್ನಪೂರ್ಣೇಶ್ವರಿನಗರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





