Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ನಾಡದೋಣಿ ಮೀನುಗಾರಿಕಾ ಸೀಮೆಎಣ್ಣೆ...

ಉಡುಪಿ: ನಾಡದೋಣಿ ಮೀನುಗಾರಿಕಾ ಸೀಮೆಎಣ್ಣೆ ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Feb 2018 8:42 PM IST
share
ಉಡುಪಿ: ನಾಡದೋಣಿ ಮೀನುಗಾರಿಕಾ ಸೀಮೆಎಣ್ಣೆ ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಉಡುಪಿ, ಫೆ.26: ನಾಡದೋಣಿ ಮೀನುಗಾರಿಕೆಗೆ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ಸಹಸ್ರ ಸಂಖ್ಯೆಯ ಮೀನು ಗಾರರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುು ಬೃಹತ್ ಪ್ರತಿಭಟನೆ ನಡೆಸಿದರು.

ಒಕ್ಕೂಟದ ಅಧ್ಯಕ್ಷ ಸೋಮಶೇಖರ್ ಖಾರ್ವಿ ಮಾತನಾಡಿ, ಅನೇಕ ವರ್ಷ ಗಳಿಂದ ಸರಕಾರ ನಾಡದೋಣಿ ಮೀನುಗಾರರಿಗೆ ಸೆಪ್ಟೆಂಬರ್ ತಿಂಗಳನಿಂದ ಮೇ ತಿಂಗಳವರೆಗೆ ನ್ಯಾಯ ಬೆಲೆ ಅಂಗಡಿ ಹಾಗೂ ಮೀನುಗಾರಿಕಾ ಸಹಕಾರಿ ಸಂಘಗಳ ಮೂಲಕ ಸೀಮೆಎಣ್ಣೆಯನ್ನು ವಿತರಿಸುತ್ತಿದ್ದು, ಈ ವರ್ಷ ಕೂಡ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೆ ಸೀಮೆಎಣ್ಣೆ ನೀಡಿದೆ. ಆದರೆ ಡಿಸೆಂಬರ್, ಜನವರಿ ಮತ್ತು ಫೆಬ್ರವರಿ ತಿಂಗಳ ಸೀಮೆಎಣ್ಣೆಯನ್ನು ಇನ್ನೂ ವಿತರಣೆ ಮಾಡಿಲ್ಲ ಎಂದು ತಿಳಿಸಿದರು.

ಸರಕಾರದ ಆದೇಶದ ಪ್ರಕಾರ ಸೀಮೆಎಣ್ಣೆ ವಿತರಣೆಗೆ ಬೇಕಾದ ಅನುದಾನ ವನ್ನು ಬಿಡುಗಡೆ ಮಾಡಲಾಗಿದೆ. ಆದರೆ ಆಹಾರ ನಿಗಮದಿಂದ ಸೀಮೆಎಣ್ಣೆ ಯನ್ನು ವಿತರಣೆ ಮಾಡಿಲ್ಲ. ಮೀನುಗಾರಿಕೆಗೆ ಇನ್ನೂ ಮಾರ್ಚ್, ಎಪ್ರಿಲ್, ಮೇ ತಿಂಗಳ ಸೀಮೆಎಣ್ಣೆ ಅಗತ್ಯವಿದ್ದು, ಈ ಉದ್ಯೋಗ ಮಾಡಬೇಕಾದರೆ ಸೀಮೆಎಣ್ಣೆ ಹೊರತುಪಡಿಸಿ ಬೇರೆ ಮಾರ್ಗವೂ ಇಲ್ಲ. ಈಗಾಗಲೇ ಮೂರು ತಿಂಗಳಿನಿಂದ ಸೀಮೆಎಣ್ಣೆ ವಿತರಣೆ ಆಗದೆ ಇರುವುದರಿಂದ ಮೀನುಗಾರಿಕೆ ಮಾಡಲು ಸಾಧ್ಯವಾಗದೆ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಅವರು ದೂರಿದರು.

ಆದುದರಿಂದ ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಬೇಕಾದ ಸೀಮೆಎಣ್ಣೆಯನ್ನು ತಕ್ಷಣವೇ ವಿತರಿಸಲು ಕ್ರಮಕೈಗೊಳ್ಳಬೇಕು. ಈ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸ್ಥಳಕ್ಕೆ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಬೈಂದೂರು ಶಾಸಕ ಗೋಪಾಲ ಪೂಜಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಉಪೇಂದ್ರ ಪೈ ಸ್ಮಾರಕ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಇದರಲ್ಲಿ ಜಿಲ್ಲೆ ವಿವಿಧೆಡೆಗಳಿಂದ ಸಾವಿರಾರು ಮೀನುಗಾರರು ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಂಜು ಬಿಲ್ಲವ, ಗೌರವಾಧ್ಯಕ್ಷರಾದ ಮದನ್ ಕುಮಾರ್ ಹಾಗೂ ನವೀನ್‌ಚಂದ್ರ, ಮುಖಂಡ ರಾದ ಜನಾರ್ದನ ತಿಂಗಳಾಯ, ಚಂದ್ರಕಾಂತ ಕರ್ಕೆರ, ಅಝೀಝ್ ಶಿರೂರು, ಸಾಹುಲ್, ದೇವದಾಸ ಖಾರ್ವಿ, ನರೇಶ್ ಖಾರ್ವಿ, ಸುರೇಶ್ ಖಾರ್ವಿ, ಅಣ್ಣಯ್ಯ ಖಾರ್ವಿ, ಮಾಜಿ ಶಾಸಕ ರಘುಪತಿ ಭಟ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಸಮಸ್ಯೆ ಸರಕಾರದ ಗಮನಕ್ಕೆ: ಡಿಸಿ ಭರವಸೆ
ಮೀನುಗಾರರಿಂದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ಮೀನುಗಾರರಿಗೆ ಪಡಿತರ ಮೂಲಕ ಸೀಮೆಎಣ್ಣೆ ವಿತರಿಸುವ ಕ್ರಮವನ್ನು ಕೇಂದ್ರ ಸರಕಾರ ರದ್ದುಗೊಳಿಸಿದೆ.ಇದೀಗ ಕೈಗಾರಿಕೆಗಳಿಗೆ ಸೀಮಿತಗೊಳಿಸಿರುವ ಸೀಮೆಎಣ್ಣೆಯನ್ನು ವಿತರಿಸಲು ಕ್ರಮ ತೆಗೆದು ಕೊಳ್ಳಲಾಗುತ್ತದೆ. ಆದರೆ ಅದಕ್ಕೆ ದರ ನಿಗದಿ ಪಡಿಸುವ ಕೆಲಸವನ್ನು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಇನ್ನೂ ಮಾಡಿಲ್ಲ ಎಂದರು.
ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳ ಬಾಕಿ ಸೀಮೆಎಣ್ಣೆ ವಿತರಿ ಸುವ ಬಗ್ಗೆ ಇಲಾಖೆಯ ಆಯುಕ್ತರ ಗಮನಕ್ಕೆ ತರಲಾಗುವುದು. ಫೆ.28ರ ಕೊನೆ ದಿನಾಂಕದೊಳಗೆ ನ್ಯಾಯ ಬೆಲೆ ಅಂಗಡಿಗಳಿಗೆ ಟ್ಯಾಂಕರ್‌ಗಳಲ್ಲಿ ಸೀಮೆಎಣ್ಣೆ ಸರಬರಾಜು ಮಾಡುವ ವ್ಯವಸ್ಥೆ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X