Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಐಟಿ ಮದ್ರಾಸ್‌ನ ಕಾರ್ಯಕ್ರಮದಲ್ಲಿ...

ಐಐಟಿ ಮದ್ರಾಸ್‌ನ ಕಾರ್ಯಕ್ರಮದಲ್ಲಿ ಸಂಸ್ಕೃತದಲ್ಲಿ ಪ್ರಾರ್ಥನೆ: ವಿವಾದ ಸೃಷ್ಟಿ

ವಾರ್ತಾಭಾರತಿವಾರ್ತಾಭಾರತಿ26 Feb 2018 9:11 PM IST
share
ಐಐಟಿ ಮದ್ರಾಸ್‌ನ ಕಾರ್ಯಕ್ರಮದಲ್ಲಿ ಸಂಸ್ಕೃತದಲ್ಲಿ ಪ್ರಾರ್ಥನೆ: ವಿವಾದ ಸೃಷ್ಟಿ

ಚೆನ್ನೈ,ಫೆ.26: ರಾಜ್ಯ ಸರಕಾರದ ಕಾರ್ಯಕ್ರಮಗಳಲ್ಲಿ ತಮಿಳು ಪ್ರಾರ್ಥನಾ ಗೀತೆಯನ್ನು ಹಾಡುವುದು ಸಂಪ್ರದಾಯವಾಗಿದ್ದರೂ ಕೇಂದ್ರ ಸಚಿವರಿಬ್ಬರು ಭಾಗಿಯಾಗಿದ್ದ ಐಐಟಿ ಮದ್ರಾಸ್‌ನಲ್ಲಿಯ ಕಾರ್ಯಕ್ರಮವೊಂದರಲ್ಲಿ ಸಂಸ್ಕೃತ ಪ್ರಾರ್ಥನಾ ಗೀತೆಯನ್ನು ಹಾಡಿರುವುದು ವಿವಾದವನ್ನು ಸೃಷ್ಟಿಸಿದೆ.

ಐಐಟಿ ಮದ್ರಾಸ್‌ನ ಸಹಭಾಗಿತ್ವದೊಂದಿಗೆ ಸ್ಥಾಪನೆಯಾಗಲಿರುವ ಬಂದರುಗಳು, ಜಲಮಾರ್ಗಗಳು ಮತ್ತು ಕರಾವಳಿಗಳ ರಾಷ್ಟ್ರೀಯ ತಂತ್ರಜ್ಞಾನ ಕೇಂದ್ರದ ಶಿಲಾನ್ಯಾಸಕ್ಕಾಗಿ ಗಣ್ಯರ ಆಗಮನದ ಬಳಿಕ ವಿದ್ಯಾರ್ಥಿಗಳು ದಿವಂಗತ ಕವಿ ಮುತ್ತುಸ್ವಾಮಿ ದೀಕ್ಷಿತರ್ ವಿರಚಿತ ‘ಮಹಾ ಗಣಪತಿಂ ಮಾನಸ ಸ್ವರಾಮಿ’ ಸಂಸ್ಕೃತ ಪ್ರಾರ್ಥನೆಯನ್ನು ಹಾಡಿದ್ದರು.

ರಾಜ್ಯದಲ್ಲಿಯ ಸರಕಾರಿ ಕಾರ್ಯಕ್ರಮಗಳಲ್ಲಿ ಆರಂಭದಲ್ಲಿ ಪ್ರಾರ್ಥನೆಗಾಗಿ ತಮಿಳು ಮಾತೆಯ ಸ್ತುತಿಗೀತೆಯಾದ ಮನೋಮಣಿಯಂ ಸುಂದರಂ ಪಿಳ್ಳೈ ವಿರಚಿತ ‘ತಮಿಳ್ ತಾಯಿ ವಳತ್ತು’ ಮಾತ್ರ ಬಳಕೆಯಾಗುತ್ತಿದ್ದು, ಅಂತ್ಯದಲ್ಲಿ ರಾಷ್ಟ್ರಗೀತೆಯನ್ನು ಹಾಡಲಾ ಗುತ್ತದೆ.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಪೊನ್ ರಾಧಾಕೃಷ್ಣನ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮಗಳಲ್ಲಿ ಇಂತಹುದೇ ಗೀತೆಯನ್ನು ಹಾಡಬೇಕೆಂದು ಸಂಸ್ಥೆಯು ವಿದ್ಯಾರ್ಥಿ ಗಳಿಗೆ ನಿರ್ದೇಶ ನೀಡುವುದಿಲ್ಲ ಎಂದು ಐಐಟಿ ಮದ್ರಾಸ್‌ನ ನಿರ್ದೇಶಕ ಭಾಸ್ಕರ ರಾಮಮೂರ್ತಿ ಸುದ್ದಿಗಾರರಿಗೆ ತಿಳಿಸಿದರು.

ತನ್ಮಧ್ಯೆ ಸಂಸ್ಕೃತ ಗೀತೆಯನ್ನು ಹಾಡಿರುವುದನ್ನು ಖಂಡಿಸಿರುವ ಎಂಡಿಎಂಕೆ ಮುಖ್ಯಸ್ಥ ವೈಕೊ ಅವರು, ಕಾರ್ಯಕ್ರಮದಲ್ಲಿ ಸಂಸ್ಕೃತ ಹೇರಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರಲ್ಲದೆ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೇಂದ್ರ ಸಚಿವರಿಬ್ಬರೂ ಇದಕ್ಕಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

ಕೇಂದ್ರವು ವಿವಿಧ ಮಾರ್ಗಗಳ ಮೂಲಕ ಸಂಸ್ಕೃತ ಮತ್ತು ಹಿಂದಿ ಹೇರಿಕೆಗೆ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X