Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಡಾ.ರಾಜ್‌ಕುಮಾರ್ ಒಳಾಂಗಣ...

ಬೆಂಗಳೂರು: ಡಾ.ರಾಜ್‌ಕುಮಾರ್ ಒಳಾಂಗಣ ಕ್ರೀಡಾಂಗಣ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ26 Feb 2018 9:48 PM IST
share
ಬೆಂಗಳೂರು: ಡಾ.ರಾಜ್‌ಕುಮಾರ್ ಒಳಾಂಗಣ ಕ್ರೀಡಾಂಗಣ ಲೋಕಾರ್ಪಣೆ

•ಶೆಟಲ್ ಬ್ಯಾಡ್ಮಿಂಟನ್ ಕೋರ್ಟ್
•ಯೋಗಶಾಲೆ
•ಮಲ್ಟಿ ಜಿಮ್ (ಎಲ್ಲ ವಯೋಮಾನದವರಿಗೆ)
•ಮಸಾಜ್ ಕೇಂದ್ರ(ಹಿರಿಯ ನಾಗರಿಕರಿಗೆ)
•400 ಆಸನವುಳ್ಳ ಸಭಾಂಗಣ.

ಬೆಂಗಳೂರು, ಫೆ. 26: ನಗರದಾದ್ಯಂತ ಹಲವಾರು ಕಾಮಗಾರಿಗಳು ಪ್ರತಿಯಲ್ಲಿದ್ದು, ಯಾವುದೇ ಕಾಮಗಾರಿಗೆ ಹಣದ ಕೊರತೆಯಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಸೋಮವಾರ ನಗರದ ಮಹಾಲಕ್ಷ್ಮಿಲೇಔಟ್(ನಾಗಾಪುರ ವಾರ್ಡ್)ನಲ್ಲಿ ಸುಮಾರು 13.45 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ರಾಜ್‌ಕುಮಾರ್ ಒಳಾಂಗಣ ಕ್ರೀಡಾಂಗಣ ಹಾಗೂ ವಾರ್ಡ್ ನಂ.102ರ ವೃಷಭಾವತಿ ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಯಾವುದೇ ಕಾಮಗಾರಿಗಳಿಗೆ ಹಣದ ಕೊರತೆಯಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿ, ಬಿಡಿಎ, ಜಲಮಂಡಳಿಗಳಿಗೆ ಮೂಲಕ ಹೆಚ್ಚು ಅನುದಾನ ಬಿಡುಗಡೆ ಮಾಡಿದ್ದಾರೆ. ಹೀಗಾಗಿ, ನಗರ ಅಭಿವೃದ್ಧಿ ಕಾರ್ಯಕ್ಕೆ ಯಾವುದೇ ಅಡೆತಡೆ ಎದುರಾಗುವುದಿಲ್ಲ. ನಗರದಲ್ಲಿ ಮೇಲ್ಸೇತುವೆ, ಕೆಳ ಸೇತುವೆ, ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೆ ಪಕ್ಷಾತೀತವಾಗಿ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಸರಕಾರ ನಗರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಲೇ ಬಂದಿದೆ. ಈ ಸಂಬಂಧ ಪ್ರತಿ ಪಕ್ಷಗಳು ಟೀಕೆ ಮಾಡುತ್ತಲೇ ಇದ್ದಾರೆ. ನಾವು ಅಭಿವೃದ್ಧಿಯತ್ತ ಗಮನ ಹರಿಸಿದ್ದೇವೆ. ಹೀಗಾಗಿ ನಮ್ಮದು ನುಡಿದಂತೆ ಡೆದ ಸರಕಾರ ಎಂದು ಹೇಳಿದರು.

ಕ್ರೀಡಾಂಗಣದಲ್ಲಿರುವ ವಿಶೇಷ ಸೌಲಭ್ಯಗಳು: ಕ್ರೀಡಾಂಗಣವನ್ನು 4.620 x 2245 ಚ.ಅಡಿ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ಕ್ರೀಡಾಂಗಣದ ಹವಾನಿಯಂತ್ರಣ ಸಭಾಂಗಣದಲ್ಲಿ 400 ಆಸನಗಳನ್ನು ಅಳವಡಿಸಲಾಗಿದೆ. ವೇದಿಕೆಗೆ ಲಿಕೋಸ್ಟಿಕ್ ತಂತ್ರಜ್ಞಾನದ ಅತ್ಯಾಧುನಿಕ ಶೈಲಿಯಲ್ಲಿ ವಿದ್ಯುತ್ ದೀಪಗಳನ್ನು ಹಾಕಲಾಗಿದ್ದು, ಲೈಟಿಂಗ್ ಅನ್ನು ಒಳಗೊಂಡಿರುತ್ತದೆ. 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಕಲ್ಪಿಸಲಾಗಿದೆ. ಇನ್ನು, ಕೆಳ ಹಂತದಲ್ಲಿ 280 ಆಸನಗಳು, ಬಾಲ್ಕನಿಯಲ್ಲಿ 120 ಆಸನಗಳನ್ನು ಅಳವಡಿಸಲಾಗಿದೆ.

ಕ್ರೀಡಾಂಗಣದಲ್ಲಿ ಸುಸಜ್ಜಿತವಾದ ಶೆಟಲ್ ಬ್ಯಾಡ್ಮಿಂಟನ್ ಕೋರ್ಟ್, ಮಲ್ಟಿ ಜಿಮ್, ಯೋಗಶಾಲೆಯನ್ನು ನಿರ್ಮಿಸಲಾಗಿದೆ. ಮೊದಲನೇ ಮಹಡಿಯಲ್ಲಿ ಹಿರಿಯರಿಗಾಗಿ ವ್ಯಾಯಾಮ ಶಾಲೆ. ಮತ್ತೊಂದು ಕೊಠಡಿಯಲ್ಲಿ ಎಲ್ಲ ವಯೋಮಾನದವರಿಗೂ ಅನುಕೂಲವಾಗುವಂತೆ ವ್ಯಾಯಾಮ ಸಲಕರಣೆಗಳನ್ನು ಅಳವಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಮೇಯರ್ ಆರ್.ಸಂಪತ್‌ರಾಜ್, ಶಾಸಕ ಕೆ. ಗೋಪಾಲಯ್ಯ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್, ಮಾಜಿ ಉಪಮೇಯರ್ ಎಸ್.ಟಿ. ಹೇಮಲತ, ಪಾಲಿಕೆ ಸದಸ್ಯ ಬಿ. ಭದ್ರೇಗೌಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X