ದ್ವಿತೀಯ ಪರೀಕ್ಷಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಉಡುಪಿ, ಫೆ.26: ರಾಜ್ಯಾದ್ಯಂತ ಮಾ.1ರಿಂದ 17ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆಎಸ್ಸಾರ್ಟಿಸಿ ಬಸ್ ಮೂಲಕ ತೆರಳುವ ವಿದ್ಯಾರ್ಥಿಗಳು ತಮ್ಮ ಗುರುತು ಕಾರ್ಡ್ ತೋರಿಸಿ ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್‌ನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ರೂಟ್ ಆಫೀಸರ್‌ಗಳಿಗೆ ಆದೇಶಿಸಿದರು. ಸಭೆ ಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ವಿಜಯಲಕ್ಷ್ಮೀ ಹಾಗೂ ಇತರರು ಉಪಸ್ಥಿತರಿದ್ದರು.
Next Story





