ಮಹಿಳಾ ಪೇದೆಯ ಕರ್ತವ್ಯಕ್ಕೆ ಅಡ್ಡಿ: ಮೂವರ ಬಂಧನ

ಕುಂದಾಪುರ, ಫೆ.26: ಕುಂದಾಪುರ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಜ್ಯೋತಿ ಎಂ. ಎಂಬವರಿಗೆ ಅವಾಚ್ಯ ಶಬ್ಧಗಳಿಂದ ಬೈದು ಬೆದರಿಕೆಯೊಡ್ಡಿ ಸರಕಾರಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದ ಮೂವರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಶಿವ, ಟಿಂಕು ವೆಂಕಟೇಶ ಮತ್ತು ಗಣಪತಿ ಆಚಾರ್ಯ ಬಂಧಿತ ಆರೋಪಿಗಳು. ಬಂಧಿತರನ್ನು ಪೊಲೀಸರು ಇಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.
ಟಿಂಕು ವೆಂಕಟೇಶ ವಿರುದ್ಧ ಹೂಡಲಾದ ಪ್ರಕರಣದ ಹಿನ್ನೆಲೆಯಲ್ಲಿ ಶಿವ ಫೆ.23ರಂದು ಜ್ಯೋತಿ ಅವರ ಮೊಬೈಲ್‌ಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ಬೈದು, ಬೆದರಿಕೆ ಹಾಕಿದ್ದನು. ನಂತರ ಈ ಮೂವರು ಆರೋಪಿಗಳು ಠಾಣೆಗೆ ಬಂದು ಜ್ಯೋತಿ ಅವರಿಗೆ ಬೆದರಿಕೆ ಹಾಕಿ, ಅವಾಚ್ಯ ಶಬ್ಧಗಳಿಂದ ಬೈದು ಸರಕಾರಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ್ದರೆಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Next Story





