Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀರ್ಪು ಪ್ರಕಟಿಸುವಾಗ ನ್ಯಾಯಾಧೀಶರು...

ತೀರ್ಪು ಪ್ರಕಟಿಸುವಾಗ ನ್ಯಾಯಾಧೀಶರು ಎಚ್ಚರಿಕೆ ವಹಿಸಬೇಕು: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ26 Feb 2018 10:53 PM IST
share
ತೀರ್ಪು ಪ್ರಕಟಿಸುವಾಗ ನ್ಯಾಯಾಧೀಶರು ಎಚ್ಚರಿಕೆ ವಹಿಸಬೇಕು: ಸುಪ್ರೀಂ

ಹೊಸದಿಲ್ಲಿ, ಫೆ.26: ನ್ಯಾಯಾಲಯಗಳು ತೀರ್ಪು ನೀಡುವಾಗ ನಿಷ್ಪಕ್ಷಪಾತ ನಿಲುವನ್ನು ತಳೆಯುವ ಸಂಪ್ರದಾಯವಿದೆ. ಇದನ್ನು ಪಾಲಿಸಿ ನ್ಯಾಯತೀರ್ಮಾನದ ಸಂದರ್ಭ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ನ್ಯಾಯವನ್ನು ನೀಡುವುದು ಮಾತ್ರವಲ್ಲ ಅದು ಪ್ರಕಟವಾಗಬೇಕು ಅಥವಾ ನ್ಯಾಯ ನೀಡಿರುವುದು ಗೋಚರಕ್ಕೆ ಬರಬೇಕು. ತೀರ್ಪು ಪ್ರಕಟಿಸುವಾಗ ನ್ಯಾಯಾಧೀಶರು ಸ್ವತಂತ್ರ ವಾಗಿ ಆಲೋಚಿಸಿ, ವಿವೇಕವನ್ನು ಬಳಸಿಕೊಂಡು ಸಮಯ ಸಂದರ್ಭವನ್ನು ಪರಿಗಣಿಸುವ ಸಂಪ್ರದಾಯವನ್ನು ನಮ್ಮ ನ್ಯಾಯಾಲಯಗಳು ಹೊಂದಿವೆ. ಈ ಸಂಪ್ರದಾಯವನ್ನು ಪಾಲಿಸಬೇಕು ಮತ್ತು ನೀಡುವ ತೀರ್ಪಿನಲ್ಲಿ ನ್ಯಾಯ ಗೋಚರಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ಆದರೆ ದುರದೃಷ್ಟವಶಾತ್, ದೇಶದಾದ್ಯಂತದ ನ್ಯಾಯಾಲಯಗಳಲ್ಲಿ ಕೆಲವೊಮ್ಮೆ ಪ್ರಕಟವಾಗುವ ತೀರ್ಪು ಇದಕ್ಕೆ ವ್ಯತಿರಿಕ್ತವಾಗಿರುತ್ತದೆ ಎಂದು ನ್ಯಾಯಮೂರ್ತಿಗಳಾದ ಎನ್.ವಿ.ರಮಣ ಮತ್ತು ಎಸ್.ಅಬ್ದುಲ್ ನಝೀರ್ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಅಪರಾಧ ಪ್ರಕರಣಗಳ ವಿಚಾರಣೆ ಸಂದರ್ಭ ಯುಕ್ತ ಮತ್ತು ನಿಷ್ಪಕ್ಷಪಾತ ನಿಲುವನ್ನು ತಳೆಯುವ ಸಂಪ್ರದಾಯ ನಮ್ಮ ಸಾಂವಿಧಾನಿಕ ವ್ಯವಸ್ಥೆಯ ಭಾಗವಾಗಿದೆ. ವ್ಯಕ್ತಿಯ ಹಕ್ಕು, ಹಿತಾಸಕ್ತಿ ಹಾಗೂ ನ್ಯಾಯಸಮ್ಮತ ನಿರೀಕ್ಷೆಗಳ ಮೇಲೆ ಪರಿಣಾಮ ಬೀರುವ ನಿರ್ಧಾರಗಳನ್ನು ಪ್ರಕಟಿಸುವಾಗ ವಿವೇಕವನ್ನು ಬಳಸಿಕೊಳ್ಳಬೇಕು ಎಂದು ನ್ಯಾಯಪೀಠ ತಿಳಿಸಿತು.

ತನಗೆ ಸೇರಿದ ಜಮೀನಿನ ಒಂದು ಭಾಗವನ್ನು ಅಕ್ರಮವಾಗಿ ಮತ್ತೊಬ್ಬರ ಹೆಸರಿಗೆ ಪರಿವರ್ತಿಸಲಾಗಿದೆ ಮತ್ತು ಈ ಬಗ್ಗೆ ವಿಚಾರಿಸಲು ಹೋದಾಗ ತನ್ನನ್ನು ಜಾತಿನಿಂದನೆ ಮಾಡಲಾಗಿದೆ ಎಂದು ಮಧ್ಯಪ್ರದೇಶದ ನಿವಾಸಿ, ಪರಿಶಿಷ್ಟ ಜಾತಿಯ ವ್ಯಕ್ತಿಯೋರ್ವ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದ. ವಿಚಾರಣೆ ನಡೆಸಿದ್ದ ಗ್ವಾಲಿಯರ್‌ನ ಜುಡಿಷಿಯಲ್ ನ್ಯಾಯಾಲಯ, ಕ್ರಿಮಿನಲ್ ದೂರನ್ನು ವಜಾಗೊಳಿಸಿತ್ತು. ದೂರುದಾರರು ಪರಿಶಿಷ್ಟ ಜಾತಿಗೆ ಸೇರಿದವರೆಂದು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿಲ್ಲ ಮತ್ತು ಈ ವಿವಾದ ಸಿವಿಲ್ ಪ್ರಕರಣವಾಗಿದೆ ಎಂದು ನ್ಯಾಯಾಲಯ ತಿಳಿಸಿತ್ತು.

ಈ ತೀರ್ಪನ್ನು ಸೆಷನ್ಸ್ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಈ ಸಂದರ್ಭ ದೂರುದಾರನ ಪರ ತೀರ್ಪು ನೀಡಿದ್ದ ಸೆಷನ್ಸ್ ಕೋರ್ಟ್, ಪ್ರಕರಣದ ಮರುವಿಚಾರಣೆ ನಡೆಸುವಂತೆ ಸೂಚಿಸಿ ವಿಚಾರಣಾ ನ್ಯಾಯಾಲಯಕ್ಕೆ ಮರಳಿಸಿತ್ತು. ಈ ಹಿನ್ನೆಲೆಯಲ್ಲಿ ದೂರನ್ನು ಪರಿಗಣಿಸಿದ ನ್ಯಾಯಾಧೀಶರು 2013ರ ಜನವರಿ 23ರಂದು ದೂರು ದಾಖಲಿಸಿಕೊಂಡಿದ್ದರು. ಈ ಮಧ್ಯೆ ಹೈಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಗೆ ಬಂದಾಗ ಸೆಷನ್ಸ್ ಕೋರ್ಟ್‌ನ ತೀರ್ಪನ್ನು ರದ್ದುಪಡಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಯಿತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಪೀಠವು, ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ರದ್ದುಗೊಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X