Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರೋತ್ಥಾನ ಯೋಜನೆ: 18.5 ಕೋಟಿ ರೂ....

ನಗರೋತ್ಥಾನ ಯೋಜನೆ: 18.5 ಕೋಟಿ ರೂ. ಕಾಮಗಾರಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ27 Feb 2018 8:53 PM IST
share
ನಗರೋತ್ಥಾನ ಯೋಜನೆ: 18.5 ಕೋಟಿ ರೂ. ಕಾಮಗಾರಿಗೆ ಶಿಲಾನ್ಯಾಸ

ಉಡುಪಿ, ಫೆ.27: ನಗರೋತ್ಥಾನ ಯೋಜನೆಯಡಿ ಉಡುಪಿ ನಗರಸಭಾ ವ್ಯಾಪ್ತಿಗೆ 35 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು, ತಮ್ಮ ಅಧಿಕಾರಾ ವಧಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅತೀ ಹೆಚ್ಚಿನ ಅನುದಾನ ಬಿಡುಗಡೆ ಯಾಗಿ ಸದ್ವಿನಿಯೋಗವಾಗುತ್ತಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ, ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಅವರು ಮಂಗಳವಾರ ನಗರೋತ್ಥಾನದ ಕಾಮಗಾರಿ ಉದ್ಘಾಟನಯನ್ನು ಗೋಪಾಲಪುರ ವಾರ್ಡ್‌ನಿಂದ ಆರಂಭಿಸಿ ಕಡಿಯಾಳಿಯಲ್ಲಿ ಸಮಾಪ್ತಿ ಗೊಳಿಸಿದರು. ಒಟ್ಟು 18.5 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿರು.

ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಳೀಯ ನಗರಸಭಾ ಸದಸ್ಯರ ಬೇಡಿಕೆ ಹಾಗೂ ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಿದ ಬೇಡಿಕೆಗಳಿಗೆ ಸ್ಪಂದಿಸಿ ಕಾಮಗಾರಿ ಗಳನ್ನು ಆರಂಭಿಸಿದ್ದು, ಎಲ್ಲೆಡೆ ಕಾಂಕ್ರೀಟ್ ರಸ್ತೆ, ಶಾಶ್ವತಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ನಗರದ ಸುವ್ಯವಸ್ಥಿತವಾಗಿರಲು ಮೂಲೂತ ಸೌಕರ್ಯಗಳಿರಬೇಕು ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ ಮಲ್ಪೆ ಬೀಚ್‌ಗೆ ಅತಿ ಮುಖ್ಯ ಸಂಪರ್ಕ ರಸ್ತೆ ಮೂರು ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದ್ದು, ಪ್ರವಾಸಿಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದ ಸಚಿವರು, ಎಲ್ಲಾ ಕಾಮಗಾರಿಗಳನ್ನು ಸಮಯ ಮಿತಿಯೊಳಗೆ, ಉತ್ತಮ ಗುಣಮಟ್ಟದಿಂದ ಕೈಗೊಳ್ಳ್ಳಬೇಕೆಂದರು.

ಸಚಿವರ ಜೊತೆಗೆ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್, ಗಣೇಶ್ ನೇರ್ಗಿ, ಪ್ರಶಾಂತ್ ಅಮೀನ್, ಜಾನಕಿ ಗಣಪತಿ ಶೆಟ್ಟಿಗಾರ್, ರಶ್ಮಿತಾ ಬಾಲಕೃಷ್ಣ, ಸತೀಶ್ ಅಮೀನ್ ಪಡುಕೆರೆ, ರಮೇಶ್ ಕಾಂಚನ್, ಪ್ರಶಾಂತ್ ಭಟ್, ಶೋಭಾ ಕಕ್ಕುಂಜೆ, ಸೆಲಿನ ಕರ್ಕಡ, ನಾರಾಯಣ ಕುಂದರ್, ವಿಜಯ ಪೂಜಾರ್, ಹರೀಶ್ ರಾಂ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X