ಅಕ್ರಮ ಮರಳುಗಾರಿಕೆ: ಎರಡು ಲಾರಿ ವಶ
ಕಾಪು, ಫೆ.27: ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಕಾಪು ಪೊಲೀಸರು ಫೆ. 26ರಂದು ಸಂಜೆ ವೇಳೆ ಮೂಳೂರು ಸುನ್ನಿ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಚಾಲಕರು ಲಾರಿಯನ್ನು ನಿಲ್ಲಿಸಿ ಓಡಿ ಪರಾರಿಯಾಗಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಡಾ.ಎಚ್. ಎಸ್.ಮಹದೇಶ್ವರ ಪರಿಶೀಲಿಸಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ತೆಗೆದುಕೊಂಡರು. ಲಾರಿ ಹಾಗೂ ಮರಳಿನ ಒಟ್ಟು ಮೌಲ್ಯ 16,22,500ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





