ಕಳವು ಪ್ರಕರಣ: ಆರೋಪಿಯ ಬಂಧನ
ಮಂಗಳೂರು, ಫೆ. 27: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಾರಿ ಎಂಬಲ್ಲಿ ಅಂಗಡಿಯಿಂದ ಯುವತಿಯೊಬ್ಬರ ಮೊಬೈಲ್ ಫೋನ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ಬಂದರು ನಿವಾಸಿ ಮುಹಮ್ಮದ್ ಶರ್ಫುದ್ದೀನ್ (23) ಬಂಧಿತ ಆರೋಪಿ.
ಈತ ಇತರ ಆರೋಪಿಗಳೊಂದಿಗೆ ಸೇರಿಕೊಂಡು 2017ರ ಮಾರ್ಚ್‌ನಲ್ಲಿ ಪರಾರಿ ಎಂಬಲ್ಲಿ ಸಿಗರೇಟ್ ಖರೀದಿಸುವ ನೆಪದಲ್ಲಿ ಅಂಗಡಿಗೆ ಹೋಗಿ ಯುವತಿಯ ಮೊಬೈಲ್ ಫೋನ್ ಕಳ್ಳತನ ಮಾಡಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಕಳವು ಮಾಡಿದ ಸೊತ್ತಿನೊಂದಿಗೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ. ಈತನ ಮೇಲೆ ಈಗಾಗಲೇ ಮಂಗಳೂರು ದಕ್ಷಿಣ ಠಾಣೆಯಲ್ಲಿ ಸುಲಿಗೆ ಮತ್ತು ದರೋಡೆ, ಮಂಗಳೂರು ಪೂರ್ವ ಠಾಣೆಯಲ್ಲಿ ಒಂದು ಕಳವು ಪ್ರಕರಣ ದಾಖಲಾಗಿವೆ.
Next Story





