ಮೈಸೂರು: ಮೇಯರ್ ಭಾಗ್ಯವತಿ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

ಮೈಸೂರು,ಫೆ.27: ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಬಿ.ಭಾಗ್ಯವತಿ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮಹಾನಗರ ಪಾಲಿಕೆ ಮುಂಭಾಗ ಮಂಗಳವಾರ ಮಹಿಳಾ ಕಾಂಗ್ರೆಸ್, ಎಸ್ಸಿ,ಎಸ್.ಟಿ ಹಿಂದುಳಿದ ವರ್ಗ, ಸೇವಾದಳ, ಅಲ್ಪಸಂಖ್ಯಾತ, ಯುವ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಮುಂಚೂಣಿ ಘಟಕಗಳ ವತಿಯಿಂದ ಮೇಯರ್ ಭಾಗ್ಯವತಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಮಾತನಾಡಿ, ಇದೀಗ ಮೇಯರ್ ಸ್ಥಾನವನ್ನು ಅಲಂಕರಿಸಿದ ಭಾಗ್ಯವತಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹವೆಸಗಿದ್ದಾರೆ. ಜೆಡಿಎಸ್ ಜೊತೆ ಕೈಜೋಡಿಸಿ ನಂಬಿಕೆ ದ್ರೋಹವೆಸಗಿದ್ದಾರೆ. ಅವರು ಮೇಯರ್ ಸ್ಥಾನದಲ್ಲಿ ಕುಳಿತುಕೊಳ್ಳಲು ಅನರ್ಹರು. ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪಕ್ಷದ್ರೋಹಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ವಿವಿಧ ನಿಗಮ ಮಂಡಳಿ ಅಧ್ಯಕ್ಷರಾದ ಬಿ.ಸಿದ್ಧರಾಜು, ಮಲ್ಲಿಗೆ ವೀರೇಶ್, ಎಚ್.ಎ.ವೆಂಕಟೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಬಾಬು, ಮೈಸೂರು ಬಸವಣ್ಣ ಸೇರಿದಂತೆ ಕಾಂಗ್ರೆಸ್ ಮುಂಚೂಣಿ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು, ಪಾಲಿಕೆಯ ಸದಸ್ಯರು ಪಾಲ್ಗೊಂಡಿದ್ದರು.





