ಮದ್ದೂರು: ಆಕಸ್ಮಿಕ ಬೆಂಕಿ; 10 ಲಕ್ಷ ರೂ. ಮೌಲ್ಯದ ಕೇಬಲ್ ಭಸ್ಮ

ಮದ್ದೂರು, ಫೆ.27: ಪಟ್ಟಣದ ಕೊಲ್ಲಿ ವೃತ್ತದ ಬಳಿ ಆಕಸ್ಮಿಕ ಬೆಂಕಿ ಬಿದ್ದು ಸುಮಾರು 10 ಲಕ್ಷ ರೂ. ಮೌಲ್ಯದ ಕೇಬಲ್ ಭಸ್ಮವಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿ, ಮತ್ತಷ್ಟು ನಷ್ಟವನ್ನು ತಪ್ಪಿಸಿದ್ದಾರೆ.
ಪಟ್ಟಣ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ಗುತ್ತಿಗೆ ಪಡೆದಿರುವ ಮೈಸೂರಿನ ಸ್ಕಿಲ್‍ಟೆಕ್ ಕಂಪನಿ ಈ ಕೇಬಲ್ ದಾಸ್ತಾನು ಮಾಡಿತ್ತು.
ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ನಾಗಭೂಷಣ್, ಆಡಳಿತಾಧಿಕಾರಿ ನಾಗರಾಜು, ಸ್ಕಿಲ್‍ಟೆಕ್ ಕಂಪನಿಯ ಭರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Next Story





