Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಮಾಯಣ ಬಲಪಂಥೀಯರ ವಶಕ್ಕೆ ಬೇಡ:...

ರಾಮಾಯಣ ಬಲಪಂಥೀಯರ ವಶಕ್ಕೆ ಬೇಡ: ಓ.ಎಲ್.ನಾಗಭೂಷಣ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 Feb 2018 8:58 PM IST
share
ರಾಮಾಯಣ ಬಲಪಂಥೀಯರ ವಶಕ್ಕೆ ಬೇಡ: ಓ.ಎಲ್.ನಾಗಭೂಷಣ ಸ್ವಾಮಿ

ಬೆಂಗಳೂರು, ಫೆ.28: ಸಾವಿರಾರು ವರ್ಷಗಳ ಕಾಲದಿಂದಲೂ ಜನ ಸಾಮಾನ್ಯರ ಬದುಕಿನಲ್ಲಿ ಹಾಸು ಹೊಕ್ಕಾಗಿರುವ ಮಹಾಭಾರತ ಮತ್ತು ರಾಮಾಯಣವನ್ನು ಬಲಪಂಥೀಯರ ಕೈಗೆ ಒಪ್ಪಿಸಿ ಸುಮ್ಮನೆ ಕೂತ್ತಿದ್ದು ಸಾಕು. ಇನ್ನು ಮುಂದಾದರು ಈ ಮಹಾಕಾವ್ಯಗಳನ್ನು ಗಂಭೀರವಾಗಿ ಅಧ್ಯಯನ ಮಾಡಿ ವರ್ತಮಾನಕ್ಕೆ ಸರಿಹೊಂದುವಂತೆ ರೂಪಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಹಿರಿಯ ವಿಮರ್ಶಕ ಡಾ.ಓ.ಎಲ್.ನಾಗಭೂಷಣ ಸ್ವಾಮಿ ಅಭಿಪ್ರಾಯಿಸಿದರು.

ಬುಧವಾರ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ನ್ಯಾಷನಲ್ ಕಾಲೇಜು ನಗರದ ಮಲ್ಟಿಮೀಡಿಯಾ ಸಭಾಂಗಣದಲ್ಲಿ ‘ಕುವೆಂಪು: ಶ್ರೀರಾಮಾಯಣ ದರ್ಶನಂ-ಜ್ಞಾನಪೀಠ-50’ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಾಮಾಯಣ’ ಹಾಗೂ ‘ಮಹಾಭಾರತ’ ಎಂಬುದು ಒಂದು ಕಾವ್ಯ, ಒಂದು ಪುರಾಣವಲ್ಲ. ಹಳ್ಳಿಗೊಂದು ರಾಮಾಯಣ, ಮಹಾಭಾರತಗಳಿವೆ. ಹೀಗಾಗಿ ಕಾಳಿದಾಸ, ಅಭಿನವ ಗುಪ್ತ, ಪಂಪ, ರನ್ನ ಸೇರಿದಂತೆ ಹಲವು ಚಿಂತಕರು, ಬರಹಗಾರರು ರಾಮಾಯಣ, ಮಹಾಭಾರತ ಕಾವ್ಯವನ್ನು ತಮ್ಮ ಅನುಭವಕ್ಕೆ ತಕ್ಕಂತೆ ವಿಸ್ತರಿಸುತ್ತಾ ಬಂದಿದ್ದಾರೆ ಎಂದು ಅವರು ಹೇಳಿದರು.

ರಾಮಾಯಣ ಮತ್ತು ಮಹಾಭಾರತ ಮಹಾಕಾವ್ಯವಾಗಿದ್ದಾಗ, ಅದನ್ನು ತಮ್ಮ ಅನುಭವಕ್ಕೆ ತಕ್ಕಂತೆ ವಿಸ್ತರಿಸಿಕೊಳ್ಳಬಹುದಾಗಿತ್ತು. ಆದರೆ, ಭಕ್ತಿ ಪಂಥ ಪ್ರಾರಂಭವಾದ 13ನೆ ಶತಮಾನದ ಆರಂಭದಲ್ಲಿ ಈ ಕಾವ್ಯಗಳಿಗೆ ಪುರಾಣಗಳ ಬಣ್ಣ ಕಟ್ಟಲಾಯಿತು. ರಾಮ, ಸೀತೆ, ಕೃಷ್ಣ ಸೇರಿದಂತೆ ಇಲ್ಲಿ ಬರುವ ಪಾತ್ರಗಳಿಗೆ ದೈವಿಕ ಸ್ವರೂಪವನ್ನು ಕೊಡಲಾಯಿತು. ನಂತರದಲ್ಲಿ ಬ್ರಿಟಿಷರ ಕಾಲದಿಂದಾಚೆಗೆ ರಾಮಾಯಣ ಹಾಗೂ ಮಹಾಭಾರತಗಳು ಚರಿತ್ರೆಯ ರೂಪ ಪಡೆದುಕೊಂಡಿತು ಎಂದು ಅವರು ವಿಶ್ಲೇಷಿಸಿದರು.

ಕೆಲವು ಪಟ್ಟಭದ್ರರು ರಾಮಾಯಣ ಮತ್ತು ಮಹಾಭಾರತಕ್ಕೆ ಚರಿತ್ರೆಯ ಬಣ್ಣ ಕಟ್ಟಿ ರಾಜಕೀಯ ಸ್ವರೂಪ ಕೊಟ್ಟರು. ಅಲ್ಲಿಂದ ರಾಮಾಯಣ, ಮಹಾಭಾರತದ ಪಾತ್ರಗಳ ಕುರಿತು ವಿಮರ್ಶೆ, ಪ್ರಶ್ನೆ ಮಾಡುವವರ ವಿರುದ್ಧ ವಾಗ್ದಾಳಿ, ಹಲ್ಲೆಗಳು ನಡೆಸುವಂತಹ ಘಟನೆಗಳು ನಡೆಯುತ್ತಾ ಬಂದಿವೆ. ಹೀಗಾಗಿ ರಾಮಾಯಣ, ಮಹಾಭಾರತದ ನಿಜವಾದ ಸ್ವರೂಪ, ತತ್ವಗಳೇನು ಎಂಬುದನ್ನು ಜನಸಾಮಾನ್ಯರಿಗೆ ತಿಳಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಕೆ.ಮರುಳಸಿದ್ಧಪ್ಪ ಮಾತನಾಡಿ, ಇಂದಿಗೂ ಗ್ರಾಮಾಂತರ ಜನತೆ ರಾಮಾಯಣ, ಮಹಾಭಾರತದ ಮಹಾಕಾವ್ಯಗಳಲ್ಲಿ ಕಂಡುಬರುವ ಪಾತ್ರಗಳ ಜತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದಾರೆ. ಆಯಾ ಪ್ರದೇಶಗಳಿಗೆ ಹೊಂದಿಕೊಂಡಂತೆ ರಾಮಾಯಣ, ಮಹಾಭಾರತದ ಕಥನಾ ಸ್ವರೂಪವು ಬದಲಾಗಿರುವುದನ್ನು ಕಾಣಬಹುದಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ರಾಮಾಯಣ ಹಾಗೂ ಮಹಾಭಾರತ ಕುರಿತು ಗೊತ್ತಿರದ ಯಾವ ವ್ಯಕ್ತಿಯೂ ಇಲ್ಲ. ಪ್ರತಿಯೊಬ್ಬನು ತನ್ನದೆ ಆದ ಅನುಭವದಲ್ಲಿ ರಾಮಾಯಣ ಮಹಾ ಕಾವ್ಯದಲ್ಲಿ ಬರುವ ಪಾತ್ರಗಳ ಜತೆ ಸಂಬಂಧ ಏರ್ಪಡಿಸಿಕೊಂಡಿರುತ್ತಾರೆ. ಹೀಗಾಗಿ ದೇಶದ ನಿಜವಾದ ಅಸ್ಮಿತೆ ರಾಮಾಯಣ ಹಾಗೂ ಮಹಾಭಾರತದಲ್ಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ನಾಟಕಕಾರ ಕೆ.ವೈ.ನಾರಾಯಣಸ್ವಾಮಿ, ವಿಮರ್ಶಕ ಎಚ್.ದಂಡಪ್ಪ, ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲ ಎಚ್.ಆರ್.ಕೃಷ್ಣಮೂರ್ತಿ, ಗೌರವ ಕಾರ್ಯದರ್ಶಿ ಎಸ್.ಎನ್.ನಾಗರಾಜ ರೆಡ್ಡಿ ಮತ್ತಿತರರಿದ್ದರು.

ರಾಮನ ಜನ್ಮಸ್ಥಳ ನೂರಾರು
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ರಾಮ ಮಂದಿರಗಳಿವೆ. ಅಲ್ಲಿನ ಎಲ್ಲ ದೇವಸ್ಥಾನಗಳ ಅರ್ಚಕರು ರಾಮ ಇಲ್ಲಿಯೆ ಹುಟ್ಟಿದ ಅನ್ನುತ್ತಾರೆ. ಹೀಗಾಗಿ ದೇಶದಲ್ಲಿ ಒಂದು ರಾಮನಿಲ್ಲ. ನಮ್ಮ ಮಹಾಕಾವ್ಯಗಳ ಪ್ರಕಾರ ಹಳ್ಳಿಗೊಂದು ರಾಮಾಯಣ ನಡೆದಿರಬಹುದು. ಹಳ್ಳಿಗೊಬ್ಬ ರಾಮನಿರಬಹುದು.
-ಮರುಳಸಿದ್ಧಪ್ಪ ಅಧ್ಯಕ್ಷ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X