ಬೆಂಗಳೂರು: ಗಾಂಜಾ ಮಾರಾಟ; ಇಬ್ಬರ ಬಂಧನ

ಬೆಂಗಳೂರು, ಫೆ.28: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ವಿವಿಪುರಂ ಠಾಣಾ ಪೊಲೀಸರು, 560 ಗ್ರಾಂ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಹೊಸಕೋಟೆ ತಾಲೂಕಿನ ನಿಡ್ಲಘಟ್ಟ ಮಸ್ತಾನ್‌ಖಾನ್(29) ಹಾಗೂ ಅಟ್ಟೂರು ಮಂಜುನಾಥ ಎಂದು ಪೊಲೀಸರು ಗುರುತಿಸಿದ್ದಾರೆ.
ಮಾದಕವಸ್ತು ಗಾಂಜಾವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಖರೀದಿ ಮಾಡಿಕೊಂಡು ಬಂದು ಹೆಚ್ಚು ಹಣ ಸಂಪಾದನೆ ಮಾಡುವ ಉದ್ದೇಶದಿಂದ ಚಿಕ್ಕ ಚಿಕ್ಕ ಪ್ಯಾಕೇಟ್‌ಗಳನ್ನು ಮಾಡಿ ಬೆಂಗಳೂರಿನಲ್ಲಿ ಕಾಲೇಜು ಬಳಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಗುರುತಿಸಿದ್ದಾರೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ವಿವಿಪುರಂ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





