Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನ: ಮತದಾರರ ಅಂತಿಮ ಪಟ್ಟಿ ಪ್ರಕಟ;...

ಹಾಸನ: ಮತದಾರರ ಅಂತಿಮ ಪಟ್ಟಿ ಪ್ರಕಟ; ಒಟ್ಟು 14,04,319 ಮತದಾರರು

ವಾರ್ತಾಭಾರತಿವಾರ್ತಾಭಾರತಿ28 Feb 2018 11:49 PM IST
share
ಹಾಸನ: ಮತದಾರರ ಅಂತಿಮ ಪಟ್ಟಿ ಪ್ರಕಟ; ಒಟ್ಟು 14,04,319 ಮತದಾರರು

ಹಾಸನ ಫೆ.28: ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಇಂದು ಹಾಸನ ಜಿಲ್ಲಾ ವ್ಯಾಪ್ತಿಯ ಏಳು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ಅವರು ಪ್ರಕಟಿಸಿದರು.

ಮತದಾರರ ನೋಂದಣಿ ನಿಯಮ 1960ರ ಕಲಂ 22(1) ರಂತೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಅಂತಿಮ ಮತದಾರರ ಪಟ್ಟಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ನಾರಾಯಣಗೌಡ, ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ಎ.ಪಿ.ಅಹಮದ್, ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ವೇಣುಗೋಪಾಲ, ಜೆಡಿ(ಎಸ್)ನ ಶೇಷಾದ್ರಿ, ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಸಿ. ಡೋಂಗ್ರೆ ಹಾಜರಿದ್ದರು. 

ಏಜೆಂಟರುಗಳ ಪಟ್ಟಿ ನೀಡಲು ಮನವಿ: ಜಿಲ್ಲೆಯಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ರಾಜಕೀಯ ಪಕ್ಷಗಳಿಂದ ಮತಗಟ್ಟೆ ಹಂತವಾರು ಏಜೆಂಟರನ್ನು ನೇಮಿಸಿ ಪಟ್ಟಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಹಾಸನ ಜಿಲ್ಲೆಯಲ್ಲಿ ಚುನಾವಣಾ ವಿಷಯವಾಗಿ ದೂರು ಸ್ವೀಕರಿಸಲು ಟೋಲ್ ಫ್ರೀ ಸಹಾಯವಾಣಿ (ಸಂಖ್ಯೆ: 1077) ತೆರೆಯಲಾಗಿದ್ದು, ಚುನಾವಣೆಗೆ ಸಂಬಂಧಿಸಿದಂತೆ ದೂರು ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ರಾಯಭಾರಿ ನೇಮಕ: ಮತದಾನದ ಮಹತ್ವ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ, ಮತದ ಹಕ್ಕು ಚಲಾಯಿಸಲು ಮತದಾರರನ್ನು ಪ್ರೇರೇಪಿಸಲು ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳದ ವ್ಯಕ್ತಿಯನ್ನು ಚುನಾವಣಾ ರಾಯಭಾರಿಯನ್ನಾಗಿ ನೇಮಿಸಿಕೊಳ್ಳುವ ಬಗ್ಗೆ ಪರಿಶೀಲಿಸಲಾಗುವುದು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆಗೆ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದರು.

ಪರಿಶೀಲನೆಗೆ ಅವಕಾಶ: ಇವಿಎಂ ಹಾಗೂ ವಿವಿ ಪ್ಯಾಟ್ ಗಳ ಪ್ರಥಮ ಹಂತದ ತಪಾಸಣೆ (ಎಫ್.ಎಲ್.ಸಿ.) ಕಾರ್ಯವು ಮಾ. 3 ರಿಂದ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿರಬೇಕು ಎಂದು ಕೋರಿದರು.

ಜಿಲ್ಲೆಯಲ್ಲಿ ​ಒಟ್ಟು 14,04,319 ಮತದಾರರು
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 14,04,319 ಮತದಾರರು ಈ ಭಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದ ಹಕ್ಕು ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಅಂತಿಮ ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಬುಧವಾರ ಪ್ರಕಟಿಸಿದ ಜಿಲ್ಲಾಧಿಕಾರಿ, 7,09,910 ಪುರುಷರು ಹಾಗೂ 6,94,409 ಮಹಿಳೆಯರು ಈ ಬಾರಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 1966 ಮತಗಟ್ಟೆಗಳನ್ನು ತೆರೆಯಲಾಗುತ್ತಿದೆ. ಹೊಸದಾಗಿ ಒಟ್ಟು 33,106 ಮಂದಿ ಮತದಾರರು ಹೆಸರು ನೋಂದಣಿ ಮಾಡಿದ್ದಾರೆ. ಇದರಲ್ಲಿ 18 ರಿಂದ 19 ವರ್ಷ ವಯಸ್ಸಿನ ಒಟ್ಟು 15,287 ಯುವ ಮತದಾರರು ಸೇರಿದ್ದಾರೆ ಎಂದು ಹೇಳಿದರು.

ಅಲ್ಲದೆ, ಮರಣ, ವಲಸೆ, ಪುನರಾವರ್ತನೆ ಹಾಗೂ ಅನರ್ಹತೆ ಕಾರಣಕ್ಕಾಗಿ ಒಟ್ಟು 35,988 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇದರಲ್ಲಿ 17,965 ಪುರುಷರು ಹಾಗೂ 18,023 ಮಹಿಳೆಯರು ಸೇರಿದ್ದಾರೆ. ಒಟ್ಟು 6538 ಮತದಾರರು ಹೆಸರು, ವಿಳಾಸ ಸೇರಿದಂತೆ ಇನ್ನಿತರೆ ಅಂಶಗಳನ್ನು ತಿದ್ದುಪಡಿ ಮಾಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X