ಕಾರ್ತಿ ಚಿದಂಬರಂ ಬಂಧನ
ಐಎನ್‌ಎಕ್ಸ್ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಇಂದು ಬೆಳಗ್ಗೆ ಕಾರ್ತಿ ಚಿದಂಬರಂ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಕಾರ್ತಿ ಚಿದಂಬರಂ ಬಂಧನದ ಮೊದಲು ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ತಿ ವಿದೇಶ ಪ್ರವಾಸ ಮುಗಿಸಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ನಾವು ಅವರನ್ನು ಬಂಧಿಸಿದೆವು. ಆನಂತರ ಅವರನ್ನು ಗುಪ್ತ ಸ್ಥಳಕ್ಕೆ ಕೊಂಡೊಯ್ದು ವಿಚಾರಣೆ ನಡೆಸಿರುವುದಾಗಿ ಸಿಬಿಐ ಮೂಲಗಳು ತಿಳಿಸಿವೆ.
Next Story





