ಕರ್ನಾಟಕ ಚುನಾವಣೆ: ಕಾಂಗ್ರೆಸ್‌ನ ಪರಿಶೀಲನಾ ಸಮಿತಿಗೆ ಮಿಸ್ತ್ರಿ ನೇತೃತ್ವ

ಹೊಸದಿಲ್ಲಿ,ಮಾ.1:ಹಿರಿಯ ಕಾಂಗ್ರೆಸ್ ನಾಯಕ ಮಧುಸೂದನ ಮಿಸ್ತ್ರಿ ಅವರು ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗಾಗಿ ಕಾಂಗ್ರೆಸ್‌ನ ಪರಿಶೀಲನಾ ಸಮಿತಿಯ ಮುಖ್ಯಸ್ಥರಾಗಿರಲಿದ್ದಾರೆ.
ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ ಗಾಂಧಿಯವರ ಉಪಸ್ಥಿತಿಯಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಪಕ್ಷದ ಸಂಸದರಾದ ತಾಮ್ರಧ್ವಜ ಸಾಹು ಮತ್ತು ಗೌರವ ಗೊಗೊಯ್ ಅವರು ಸಮಿತಿಯ ಸದಸ್ಯರಾಗಿ ಹಾಗೂ ಕರ್ನಾಟಕದ ಉಸ್ತುವಾರಿ ಹೊಂದಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿ.ಪರಮೇಶ್ವರ ಅವರು ಪದನಿಮಿತ್ತ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
Next Story





