Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರೇ ಇಲ್ಲದೆ ನಡೆದ ಜನಾಭಿಪ್ರಾಯದ ಸಭೆ :...

ಜನರೇ ಇಲ್ಲದೆ ನಡೆದ ಜನಾಭಿಪ್ರಾಯದ ಸಭೆ : ಮಡಿಕೇರಿ ನಗರಸಭೆಗೆ ತೀವ್ರ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ1 March 2018 7:14 PM IST
share
ಜನರೇ ಇಲ್ಲದೆ ನಡೆದ ಜನಾಭಿಪ್ರಾಯದ ಸಭೆ : ಮಡಿಕೇರಿ ನಗರಸಭೆಗೆ ತೀವ್ರ ಮುಖಭಂಗ

ಮಡಿಕೇರಿ,ಮಾ.1:ಜಿಲ್ಲಾ ಕೇಂದ್ರ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದ ಅವಧಿಯಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ದಿಕ್ಸೂಚಿಯಾಗಿರುವ ವಾರ್ಷಿಕ ಆಯವ್ಯಯವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ನಡೆದ ಪೂರ್ವಭಾವಿ ಸಭೆಗೆ ಸಾರ್ವಜನಿಕರು ಗೈರು ಹಾಜರಾಗಿದ್ದರು. ಕೇವಲ ಒಂದು ದಿನ ಮೊದಲು ಸಾರ್ವಜನಿಕ ಪ್ರಕಟಣೆ ಹೊರಡಿಸಿದ ನಗರಸಭೆಯ ನಿಷ್ಕಾಳಜಿಯೇ ಇದಕ್ಕೆ ಪ್ರಮುಖ ಕಾರಣವಾಗಿದೆ ಎನ್ನುವ ಟೀಕೆ ಕೇಳಿ ಬಂದಿದೆ.

ನಗರಸಭೆಯ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ಸಭೆಯತ್ತ ಮುಖ ಮಾಡಲಿಲ್ಲ. ಪೌರಾಯುಕ್ತರಾದ ಶುಭ, ಮಾಜಿ ಅಧ್ಯಕ್ಷೆ ಜುಲೇಕಾಬಿ, ಮಾಜಿ ಉಪಾಧ್ಯಕ್ಷೆ ಲೀಲಾಶೇಷಮ್ಮ, ಸದಸ್ಯ ಕೆ.ಜಿ.ಪೀಟರ್ ಉಪಸ್ಥಿತಿ ಸಭೆಯ ಆರಂಭದಲ್ಲಿ ಕಂಡು ಬಂದರು. ಕೊನೆ ಹಂತದಲ್ಲಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಸದಸ್ಯರುಗಳಾದ ಮನ್ಸೂರ್, ಉದಯ ಕುಮಾರ್ ಆಗಮಿಸಿದರಾದರು, ಸಾರ್ವಜನಿಕರು ಮಾತ್ರ ಬರಲಿಲ್ಲ. 

ಕಾಟಾಚಾರದ ಸಭೆ

ಅದಾಗಲೆ ನಗರಸಭೆಯಲ್ಲಿ ಆಯವ್ಯಯವನ್ನು ಮಂಡಿಸಿ ಆಗಿದೆ. ಇದೀಗ ಸಾರ್ವಜನಿಕರ ಪೂರ್ವಭಾವಿ ಸಭೆಯನ್ನು ತರಾತುರಿಯಲ್ಲಿ  ಕರೆಯಲಾಗಿದ್ದು, ಸಾರ್ವಜನಿಕರು ಪಾಲ್ಗೊಂಡಿಲ್ಲ. ಇದೊಂದು ಕಾಟಾಚಾರದ ಸಭೆ ಎಂದು ಆರೋಪಿಸಿದ ಸದಸ್ಯೆ ಲೀಲಾಶೇಷಮ್ಮ ಹಾಗೂ ದೇಶ ಪ್ರೇಮಿ ಯುವಕ ಸಂಘದ ಅರುಣ್ ಶೆಟ್ಟಿ ಸಭೆಯಿಂದ ಹೊರ ನಡೆದರು.

ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಆಯವ್ಯಯಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಬೇಕೆಂದು ವಿರೋಧ ಪಕ್ಷ ಬಿಜೆಪಿ ಸದಸ್ಯರು ಆಗ್ರಹಿಸಿದ್ದರಾದರು ಸಭೆಯಲ್ಲಿ ಅವರ ಸುಳಿವಿರಲಿಲ್ಲ.

ಪೌರಾಯುಕ್ತೆ ಶುಭ ಅವರು, ಮುನಿಸಿಪಲ್ ಆಕ್ಟ್ 287 ರ ಪ್ರಕಾರ ಸಾರ್ವಜನಿಕರಿಂದ ಆಯವ್ಯಯಕ್ಕೆ ಸಂಬಂಧಿಸಿದಂತೆ ಅಹವಾಲುಗಳನ್ನು ಸಲಹೆ ಸೂಚನೆಗಳನ್ನು ಸಂಗ್ರಹಿಸುವುದು ಅವಶ್ಯ. ಸಭೆಯನ್ನು ಬರಕಾಸ್ತುಗೊಳಿಸುವುದು ಸಮಂಜಸವಲ್ಲವೆಂದರು. ಸಾರ್ವಜನಿಕರಿಗಾಗಿ ಕೆಲ ಕಾಲ ಕಾಯುವುದಾಗಿ ಹೇಳಿದರಾದರು ಸಭೆ ಮುಕ್ತಾಯದವರೆಗೆ ಯಾವೊಬ್ಬ ಸಾರ್ವಜನಿಕ ವ್ಯಕ್ತಿಯೂ ಸಭಾಂಗಣ ಪ್ರವೇಶಿಸಲಿಲ್ಲ.

ಸಭೆಗೆ ಬಂದ ಪಾಲಿ ಮೇದಪ್ಪ ಅವರು ರೇಸ್ ಕೋರ್ಸ್  ಬಳಿಯ ರಸ್ತೆ ಯುಜಿಡಿ ಕಾಮಗಾರಿಯಿಂದ ಸಂಪೂರ್ಣ ಹದಗೆಟ್ಟಿರುವುದಾಗಿ ತಿಳಿಸಿದರೆ, ಮತ್ತೊಬ್ಬರು ನಗರವ್ಯಾಪ್ತಿಯ ಖಾಲಿ ನಿವೇಶನಗಳು ಕಸದ ಕೊಂಪೆಗಳಾಗುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತರು, ಯುಜಿಡಿ ಕಾಮಗಾರಿಯ ಬಳಿಕ ರಸ್ತೆಯನ್ನು ಅವರು ಸರಿಪಡಿಸಲಿದ್ದಾರೆ. ಮತ್ತೆ ರಸ್ತೆ ಹಾಳಾದಲ್ಲಿ ಅದರ ದುರಸ್ತಿಗಾಗಿ ಆಯವ್ಯಯದಲ್ಲಿ 6 ಕೋಟಿ ರೂ. ಮೀಸಲಿಟ್ಟಿರುವುದಾಗಿ ತಿಳಿಸಿದರು. ಖಾಲಿ ನಿವೇಶನಗಳಲ್ಲಿ ಶುಚಿತ್ವ ಇಲ್ಲದಿದ್ದರೆ ಅಂತಹವರಿಗೆ ನೋಟಿಸ್ ನೀಡಿ, ದಂಡ ವಿಧಿಸಲು ಕ್ರಮ ವಹಿಸುವುದಾಗಿ ತಿಳಿಸಿದರು.

ಸಭೆಯ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಉತ್ತರಿಸಿ, ನಗರದ ಅಭ್ಯುದಯಕ್ಕೆ ತನ್ನಿಂದ ಸಾಧ್ಯವಾದಷ್ಟು ಪ್ರಯತ್ನಗಳನ್ನು ಮಾಡಿದ್ದೇನೆ ಯುಜಿಡಿಯಿಂದ ರಸ್ತೆಗಳು ಹದಗೆಟ್ಟಿರುವ ಸಮಸ್ಯೆಯನ್ನು ಶೀಘ್ರ ಸರಿಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X