ಉಡುಪಿ: ಮಾ.3ರಂದು ಮಹಿಳೆಯರಿಗೆ ಕ್ರೀಡಾಕೂಟ
ಉಡುಪಿ, ಮಾ.1: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗ ವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ ಹಾಗೂ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ವತಿಯಿಂದ 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಮಾ.3ರಂದು ವಿವಿಧ ಕ್ರೀಡಾ ಸ್ಪರ್ಧೆ ಗಳನ್ನು ಆಯೋಜಿಸಲಾಗಿದೆ.
ಕ್ರೀಡಾ ಸ್ಪರ್ಧೆಗಳು ಉಡುಪಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9:30ರಿಂದ ನಡೆಯಲಿದೆ. ಆಸಕ್ತ ಮಹಿಳೆಯರು ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ (ದೂರವಾಣಿ: 0820- 2524055)ಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಅಥವಾ ಮಾ.3ರಂದು ಖುದ್ದಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





